ಚಿಕ್ಕಮಗಳೂರು: ಕಾರ್ಯಕ್ರಮವೊಂದರಲ್ಲಿ ಬಿರಿಯಾನಿ ಊಟ ಸೇವಿಸಿದ್ದ 17 ಜನರು ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ.
ಅಸ್ವಸ್ಥರನ್ನು ಕಡೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯ ಕಾರ್ಯಕ್ರಮದಲ್ಲಿ ಸಂಬಂಧಿಕರಿಗಾಗಿ ಬಿರಿಯಾನಿ ಊಟ ನೀಡಲಾಗಿತ್ತು. ಊಟ ಸೇವಿಸಿ ಮನೆಗೆ ವಾಪಾಸ್ಸಾದವರಿಗೆ ವಾಂತಿ, ಭೇದಿ ಕಾಣಿಸಿಕೊಂಡಿದೆ.
ಅಸ್ವಸ್ಥಗೊಂಡ 17 ಜನರನ್ನು ಕಡೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಸ್ವಸ್ಥರಲ್ಲಿ 9 ಮಹಿಳೆಯರಿದ್ದಾರೆ. ಸದ್ಯ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ತಾಲೂಕು ಆಸ್ಪತ್ರೆಗೆ ಕೆ.ಎಸ್.ಆನಂದ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.