alex Certify BIG NEWS: ಬಿರಿಯಾನಿ ಸೇವಿಸಿ 17 ಜನರು ಅಸ್ವಸ್ಥ; ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿರಿಯಾನಿ ಸೇವಿಸಿ 17 ಜನರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು: ಕಾರ್ಯಕ್ರಮವೊಂದರಲ್ಲಿ ಬಿರಿಯಾನಿ ಊಟ ಸೇವಿಸಿದ್ದ 17 ಜನರು ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ.

ಅಸ್ವಸ್ಥರನ್ನು ಕಡೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯ ಕಾರ್ಯಕ್ರಮದಲ್ಲಿ ಸಂಬಂಧಿಕರಿಗಾಗಿ ಬಿರಿಯಾನಿ ಊಟ ನೀಡಲಾಗಿತ್ತು. ಊಟ ಸೇವಿಸಿ ಮನೆಗೆ ವಾಪಾಸ್ಸಾದವರಿಗೆ ವಾಂತಿ, ಭೇದಿ ಕಾಣಿಸಿಕೊಂಡಿದೆ.

ಅಸ್ವಸ್ಥಗೊಂಡ 17 ಜನರನ್ನು ಕಡೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಸ್ವಸ್ಥರಲ್ಲಿ 9 ಮಹಿಳೆಯರಿದ್ದಾರೆ. ಸದ್ಯ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ತಾಲೂಕು ಆಸ್ಪತ್ರೆಗೆ ಕೆ.ಎಸ್.ಆನಂದ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...