alex Certify ಗೆಳೆಯನ ರೂಂನಲ್ಲಿ ದೈಹಿಕ ಸಂಬಂಧ, ಯೂಟ್ಯೂಬ್ ನೋಡಿ ಗರ್ಭಪಾತಕ್ಕೆ ಮುಂದಾದ ಯುವತಿಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೆಳೆಯನ ರೂಂನಲ್ಲಿ ದೈಹಿಕ ಸಂಬಂಧ, ಯೂಟ್ಯೂಬ್ ನೋಡಿ ಗರ್ಭಪಾತಕ್ಕೆ ಮುಂದಾದ ಯುವತಿಗೆ ಬಿಗ್ ಶಾಕ್

ನಾಗಪುರ: ಮಹಾರಾಷ್ಟ್ರದ ನಾಗಪುರ ಜಿಲ್ಲೆಯ ನಾರ್ಖೇಡ್ ತಾಲೂಕಿನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ 17 ವರ್ಷದ ಹುಡುಗಿಯೊಬ್ಬಳು ಯುಟ್ಯೂಬ್ ನೋಡಿಕೊಂಡು ಗರ್ಭಪಾತ ಮಾಡಿಕೊಂಡಿದ್ದಾಳೆ.

ಆರು ತಿಂಗಳ ಹಿಂದೆ ಪ್ರಿಯಕರನ ಮನೆಗೆ ಹೋಗಿದ್ದ ಅಪ್ರಾಪ್ತೆ ಆತನೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದಾಳೆ. ಇದರ ಪರಿಣಾಮ ಆಕೆ ಗರ್ಭಿಣಿಯಾಗಿದ್ದಾಳೆ. ಗೆಳೆಯನಿಗೆ ತಾನು ಗರ್ಭಿಣಿಯಾದ ವಿಚಾರವನ್ನು ತಿಳಿಸಿದ್ದು, ಆತ ಗರ್ಭಪಾತಕ್ಕೆ ಔಷಧ ನೀಡಿದರೆ ಸರಿಯಾಗುತ್ತದೆ ಎಂದು ಹೇಳಿದ್ದಾನೆ.

ಆದರೆ, ಔಷಧ ಸೇವಿಸಿದರೂ ಗರ್ಭಪಾತವಾಗಿಲ್ಲ. ಇದರಿಂದ ಆತಂಕಗೊಂಡ ಅಪ್ರಾಪ್ತೆ ಯೂಟ್ಯೂಬ್ ನೋಡಿ ಗರ್ಭಪಾತ ಮಾಡಿಕೊಳ್ಳಲು ಮುಂದಾಗಿದ್ದಾಳೆ. ಯೂಟ್ಯೂಬ್ ನಲ್ಲಿ ವಿಡಿಯೋ ನೋಡಿ ಔಷಧ ಸೇವಿಸಿ ಅದರಲ್ಲಿ ತೋರಿಸಿದಂತೆ ಗರ್ಭಪಾತ ಮಾಡಿಕೊಳ್ಳಲು ಮುಂದಾಗಿದ್ದ ಅಪ್ರಾಪ್ತೆಗೆ ಆರೋಗ್ಯ ಹದಗೆಟ್ಟಿದೆ. ಇದರಿಂದ ಅನುಮಾನಗೊಂಡ ಆಕೆಯ ತಾಯಿ ವಿಚಾರಿಸಿದಾಗ ನಡೆದ ಘಟನೆಯ ಬಗ್ಗೆ ತಿಳಿಸಿದ್ದಾಳೆ.

ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಪ್ರಸ್ತುತ ನಾಗಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಕೆಯ ಆರೋಗ್ಯ ಸುಧಾರಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ. ನಾಗಪುರದ ನಾರ್ಖೇಡ್ ತಾಲೂಕಿನ ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. 27 ವರ್ಷದ ಹುಡುಗಿಯ ಪ್ರಿಯಕರನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...