ಕರ್ನಾಟಕದ ಗಡಿಯಲ್ಲಿರುವ 865 ಹಳ್ಳಿಗಳು ತಮಗೆ ಸೇರಬೇಕೆಂದು ಮಹಾರಾಷ್ಟ್ರ ಸರ್ಕಾರ 2004ರಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ 18 ವರ್ಷಗಳ ಬಳಿಕ ಸುಪ್ರೀಂ ಕೋರ್ಟ್ ನಲ್ಲಿ ಇಂದು ನಡೆಯಲಿದೆ.
ಇದರ ಮಧ್ಯೆ ಮಹಾರಾಷ್ಟ್ರ ಪದೇ ಪದೇ ಕ್ಯಾತೆ ತೆಗೆಯುತ್ತಿದ್ದು, ಇದಕ್ಕೆ ಸಮರ್ಥವಾಗಿ ಉತ್ತರ ಕೊಟ್ಟುಕೊಂಡು ಬಂದಿರುವ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿಯೂ ರಾಜ್ಯದ ಪರ ವಾದಿಸಲು ಸಮರ್ಥ ವಕೀಲರ ತಂಡವನ್ನೇ ಸಿದ್ಧಗೊಳಿಸಿದೆ.
ರಾಜ್ಯದ ಪರವಾಗಿ ಹಿರಿಯ ವಕೀಲರಾದ ಮುಕುಲ್ ರೋಹಟಗಿ, ಶಾಮ್ ದಿವಾನ್, ಉದಯ್ ಹೊಳ್ಳ, ಮಾರುತಿ ಜಿರ್ಲೆ ಮೊದಲಾದ ಘಟಾನುಘಟಿಗಳು ಇದ್ದು, ಮಹಾರಾಷ್ಟ್ರ ಪರವಾಗಿ ಹಿರಿಯ ವಕೀಲ ಸಿ.ಎಸ್. ವೈದ್ಯನಾಥನ್ ಮೊದಲಾದವರಿದ್ದಾರೆ.