ಮೆಕ್ಸಿಕೋದಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಆರು ಮಂದಿ ಭಾರತೀಯರೂ ಸೇರಿದಂತೆ ಒಟ್ಟು 18 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಅತಿ ವೇಗವಾಗಿ ಚಲಿಸುತ್ತಿದ್ದ ಈ ಬಸ್ ಕೊರಕಲಿಗೆ ಡಿಕ್ಕಿ ಹೊಡೆದು ಇದರ ನಡುವೆ ಸಿಲುಕಿದ ಪರಿಣಾಮ ಈ ದುರ್ಘಟನೆ ನಡೆದಿದೆ.
ಈ ಬಸ್ ಮೆಕ್ಸಿಕೋ ನಗರದಿಂದ ಈಶಾನ್ಯ ಪ್ರಾಂತ್ಯವಾದ Tijuana ಗೆ ತೆರಳುತ್ತಿತ್ತು ಎನ್ನಲಾಗಿದ್ದು, ಒಟ್ಟು 40 ಮಂದಿ ಇದರಲ್ಲಿ ಪ್ರಯಾಣಿಸುತ್ತಿದ್ದರು. ನಯರಿಟ್ ನಗರದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಮೃತಪಟ್ಟ 18 ಮಂದಿ ಪೈಕಿ ಇಬ್ಬರು ಮಕ್ಕಳೂ ಸೇರಿದ್ದು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಬಹುದು ಎಂದು ಹೇಳಲಾಗುತ್ತಿದೆ. ಬಹುತೇಕರು ಅಮೆರಿಕಾಗೆ ಅಕ್ರಮವಾಗಿ ಪ್ರವೇಶಿಸಲು ಮೆಕ್ಸಿಕೋ ಗಡಿಯನ್ನು ಅವಲಂಬಿಸಿದ್ದು, ಹೀಗಾಗಿ ವಿದೇಶಿ ನಿರಾಶ್ರಿತರು ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿಗೆ ತೆರಳುತ್ತಾರೆ. ಮೃತಪಟ್ಟವರ ಪೈಕಿ ಹೆಚ್ಚಿನವರು ಇದೇ ರೀತಿ ಬಂದವರು ಎಂದು ಹೇಳಲಾಗಿದೆ.