alex Certify ಅಂತ್ಯ ಸಂಸ್ಕಾರಕ್ಕೆ ತೆರಳುವಾಗಲೇ ಭೀಕರ ಅಪಘಾತ, 18 ಮಂದಿ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂತ್ಯ ಸಂಸ್ಕಾರಕ್ಕೆ ತೆರಳುವಾಗಲೇ ಭೀಕರ ಅಪಘಾತ, 18 ಮಂದಿ ಸ್ಥಳದಲ್ಲೇ ಸಾವು

ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 18 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ನಾಡಿಯಾ ಜಿಲ್ಲೆಯ ಫುಲ್ಬರಿ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ. ಹಂಸಖಾಲಿ ಪೊಲೀಸ್ ಠಾಣೆಯ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಉತ್ತರ 24 ಪರಗಣ ಬಗ್ಡಾದಿಂದ ಮೃತದೇಹವನ್ನು ಅಂತ್ಯಸಂಸ್ಕಾರ ಮಾಡಲು ಮ್ಯಾಟಾಡೋರ್ ನಲ್ಲಿ ಜನರು ನಬದೀಪ್ ಸ್ಮಶಾನಕ್ಕೆ ಹೋಗುತ್ತಿದ್ದರು.

ನಾಡಿಯಾದ ಹಂಸ್ಖಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಫುಲ್ಬರಿ ಪ್ರದೇಶದಲ್ಲಿ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಕಲ್ಲುಗಳನ್ನು ತುಂಬಿದ ಲಾರಿಗೆ ಚಾಲಕನ ನಿಯಂತ್ರಣ ತಪ್ಪಿದ ವಾಹನ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಕನಿಷ್ಠ 18 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಶಕ್ತಿನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...