ಛತ್ತೀಸ್ ಗಢದಲ್ಲಿ ಪಿಕಪ್ ವಾಹನ ಕಂದಕಕ್ಕೆ ಉರುಳಿ ಮೃತಪಟ್ಟ ಕಾರ್ಮಿಕರ ಸಂಖ್ಯೆ 18 ಕ್ಕೆ ಏರಿಕೆಯಾಗಿದೆ.
ಛತ್ತೀಸ್ಗಢದ ಕವರ್ಧಾ ಜಿಲ್ಲೆಯ ಕುಕ್ದೂರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಪಿಕಪ್ ಕಂದಕಕ್ಕೆ ಬಿದ್ದು ಕನಿಷ್ಠ 18 ಕಾರ್ಮಿಕರು ಸಾವನ್ನಪ್ಪಿದ್ದಾರೆ.ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.
ಅಪಘಾತದಲ್ಲಿ ಒಟ್ಟು ಎಂಟು ಜನರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಕವರ್ಧಾ ಎಸ್ಪಿ ಅಭಿಷೇಕ್ ಪಲ್ಲವ್ ತಿಳಿಸಿದ್ದಾರೆ.ಛತ್ತೀಸ್ ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.
“ಕಬೀರಧಾಮ್ ಜಿಲ್ಲೆಯ ಕುಕ್ದೂರ್ ಪೊಲೀಸ್ ಠಾಣೆ ವ್ಯಾಪ್ತಿಯ ಬಹಪಾನಿ ಗ್ರಾಮದ ಬಳಿ ಪಿಕಪ್ ಪಲ್ಟಿಯಾಗಿ 18 ಗ್ರಾಮಸ್ಥರು ಸಾವನ್ನಪ್ಪಿದ್ದಾರೆ ಮತ್ತು 4 ಜನರು ಗಾಯಗೊಂಡಿದ್ದಾರೆ ಎಂಬ ಸುದ್ದಿ ಬಂದಿದೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಜಿಲ್ಲಾಡಳಿತಕ್ಕೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಅಗಲಿದ ಆತ್ಮಗಳಿಗೆ ಶಾಂತಿ ಸಿಗಲೆಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ ಮತ್ತು ಅವರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಛತ್ತೀಸ್ ಗಢ ಸಿಎಂ ವಿಷ್ಣು ದೇವ್ ಟ್ವೀಟ್ ಮಾಡಿದ್ದಾರೆ.