ಬೀದರ್: ಕಲುಷಿತ ನೀರು ಸೇವಿಸಿ 18 ಮಂದಿ ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ಕರಿಕ್ಯಾಳ ಗ್ರಾಮದಲ್ಲಿ ನಡೆದಿದೆ
ಕುಡಿಯುವ ನೀರಿನ ಬಾವಿಗೆ ಚರಂಡಿ ನೀರು ಮಿಕ್ಸ್ ಆಗಿದೆ ಎಂದು ಹೇಳಲಾಗಿದ್ದು, ಅಸ್ವಸ್ಥರನ್ನು ಔರಾದ್ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಲುಷಿತ ನೀರು ಸೇವಿಸಿ ವಾಂತಿ ಭೇದಿ ಉಂಟಾಗಿ ಅಸ್ವಸ್ಥಗೊಂಡ 18 ಜನರ ಪೈಕಿ 6 ಮಂದಿ ಮಕ್ಕಳು ಸೇರಿದ್ದಾರೆ. ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇತ್ತೀಚೆಷ್ಟೇ ಕೊಪ್ಪಳದಲ್ಲಿ ಕಲುಷಿತ ನೀರು ಸೇವಿಸಿ ಹಲವರು ಮೃತಪಟ್ಟಿದ್ದರು. ಘಟನೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕೂಡ ಅಧಿಕಾರಿಗಳಿಗೆ ವಾರ್ನಿಂಗ್ ಕೊಟ್ಟಿದ್ದರು. ಈ ನಡುವೆ ಬೀದರ್ ನಲ್ಲಿ ಘಟನೆ ನಡೆದಿದೆ.