alex Certify ಗೋವಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿ ಮೇಲೆ ಚಾಲಕನಿಂದ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೋವಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿ ಮೇಲೆ ಚಾಲಕನಿಂದ ಅತ್ಯಾಚಾರ

ಪಣಜಿ: ರಜೆಯ ನಿಮಿತ್ತ ಗೋವಾಕ್ಕೆ ಕ್ರಿಸ್​ಮಸ್​ ಪಾರ್ಟಿ ಮಾಡಲು ಸ್ನೇಹಿತರ ಜೊತೆ ತೆರಳಿದ್ದ 18 ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ಬಸ್​ ಚಾಲಕನೇ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.

ಮುಂಬೈ ಮೂಲದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಶನಿವಾರದಂದು ಆರೋಪಿಯ ಬಸ್‌ನಲ್ಲಿ ಈ ಘಟನೆ ನಡೆದಿದೆ.

ಆರೋಪಿಯು ವಾಸ್ಕೋದ ಜುವಾರಿನಗರದ ನಿವಾಸಿಯಾಗಿದ್ದಾನೆ. ಸಂತ್ರಸ್ತೆ 14 ಜನ ಸ್ನೇಹಿತರ ಜತೆಗೂಡಿ ಗೋವಾಕ್ಕೆ ಪ್ರವಾಸಕ್ಕೆ ತೆರಳಿದ್ದಳು. ಈ ಸಂದರ್ಭದಲ್ಲಿ ಆಕೆಯ ಸ್ನೇಹಿತೆಯರು ಮದ್ಯಪಾನ ಮಾಡಲು ಆರಂಭಿಸಿದ್ದರು. ಇದರಿಂದ ಕಸಿವಿಸಿಗೊಂಡ ವಿದ್ಯಾರ್ಥಿನಿ ಬಸ್​ಗೆ ವಾಪಸ್​ ಬಂದಿದ್ದಾಳೆ. ಈ ಸಂದರ್ಭದಲ್ಲಿ ಘಟನೆ ನಡೆದಿದೆ.

ಈ ಸ್ನೇಹಿತರು ಬಸ್​ ಅನ್ನು ಬಾಡಿಗೆಗೆ ಪಡೆದಿದ್ದರು. ಆರೋಪಿಯನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...