
ಬೆಂಗಳೂರು: ಭೂ ರಹಿತರಿಗೆ ಬಗರ್ ಹುಕುಂ ಯೋಜನೆ ಅಡಿ ಭೂಮಿ ಮಂಜೂರು ಮಾಡಲು ರಾಜ್ಯಾದ್ಯಂತ ಇದುವರೆಗೆ 185 ಸಮಿತಿಗಳನ್ನು ರಚಿಸಲಾಗಿದೆ. ಉಳಿದ 13 ಕ್ಷೇತ್ರಗಳಲ್ಲಿ ಮುಂದಿನ 10 ದಿನಗಳಲ್ಲಿ ಬಗರ್ ಹುಕುಂ ಸಮಿತಿಗಳನ್ನು ರಚನೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಡಾ. ಶೈಲೇಂದ್ರ ಬೆಲ್ದಾಳೆ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ.
ಕಳೆದ ಹಲವು ವರ್ಷಗಳಿಗೆ ಹೋಲಿಸಿದರೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅತಿ ಹೆಚ್ಚು ಬಗರ್ ಹುಕುಂ ಸಮಿತಿ ರಚಿಸಲಾಗಿದೆ. ಭೂಮಿ ಮಂಜೂರುಗೊಳಿಸುವ ಪ್ರಕ್ರಿಯೆಗೆ ಸಾಕಷ್ಟು ವೇಗ ನೀಡಲಾಗಿದೆ. ರಾಜ್ಯದಲ್ಲಿ 185 ಬಗರ್ ಹುಕುಂ ಸಮಿತಿ ರಚಿಸಿದ್ದು, 13 ಕ್ಷೇತ್ರಗಳಲ್ಲಿ ಬಾಕಿ ಇದೆ. ಮುಂದಿನ 10 ದಿನಗಳಲ್ಲಿ ಈ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.