ಬೆಂಗಳೂರು: ಬಿಬಿಎಂಪಿ ಹೊರತುಪಡಿಸಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಎರಡನೇ ಹಂತದಲ್ಲಿ 188 ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ 188 ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಲು ನಿರ್ಧರಿಸಿದ್ದು, ಇದಕ್ಕಾಗಿ 154 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಕೆಟಿಪಿಪಿ 4ಜಿ ಕಲಂನಿಂದ ವಿನಾಯಿತಿ ನೀಡುವ ಪ್ರಮುಖ ನಿರ್ಧಾರ ಕೈಗೊಳ್ಳಲಾಗಿದೆ.
ಮೊದಲ ಹಂತದಲ್ಲಿದ್ದಂತೆ ಇಂದಿರಾ ಕ್ಯಾಂಟೀನ್ ಅಡುಗೆ ಕೋಣೆ ಸಹಿತ ಪ್ರಿಕಾಸ್ಟ್ ವಿಧಾನ ಮತ್ತು ವಿನ್ಯಾಸದಲ್ಲೇ ಈ 188 ಇಂದಿರಾ ಕ್ಯಾಂಟೀನ್ ಗಳನ್ನು ನಿರ್ಮಿಸಲು ಮೆ. ಎಕ್ಸೆಲ್ ಪ್ರಿಕಾಸ್ಟ್ ಸಲ್ಯೂಷನ್ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ಗುತ್ತಿಗೆ ನೀಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ.