ಬೆಳಗಾವಿ- ಅಪರಿಚಿತ ಯುವಕನೊಂದಿಗೆ ಬಂದು ಬೆಳಗಾವಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಬಸ್ಸುಮ್ ಸವದತ್ತಿ (19) ಸಾವನ್ನಪ್ಪಿದ ಯುವತಿ. ಬೆಳಗಾವಿ ಜಿಲ್ಲೆ ಬೈಲಹೊಂಗಲ ಪಟ್ಟಣದ ನಿವಾಸಿಯಾಗಿದ್ದಾರೆ.
ಈಕೆ ಕಳೆದ ಒಂದು ತಿಂಗಳ ಹಿಂದೆ ಬೆಂಗಳೂರಿನಲ್ಲಿ ಕಾಲ್ ಸೆಂಟರ್ ಒಂದರಲ್ಲಿ ಕೆಲಸ ಮಾಡ್ತಾ ಇದ್ರಂತೆ. ತಬಸ್ಸುಮ್ ರನ್ನ ಅಪರಿಚಿತ ಯುವಕನೊಬ್ಬ ಏಕಾಏಕಿ ನಿನ್ನೆ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ವೈದ್ಯರು ಎಂಎಲ್‍ಸಿ ಮಾಡ್ತೀವಿ ಎಂದಿದ್ದಾರೆ. ಈ ಮಾತು ಕೇಳುತ್ತಿದ್ದಂತೆ ತಬಸ್ಸುಮ್ ನ ಮೊಬೈಲ್ ನೊಂದಿಗೆ ಅಪರಿಚಿತ ಯುವಕ ಆಸ್ಪತ್ರೆಯಿಂದ ಕಾಲ್ಕಿತ್ತಿದ್ದಾನೆ.
ವಿಚಾರ ತಿಳಿಯುತ್ತಿದ್ದಂತೆ ಈಕೆಯ ಕುಟುಂಬಸ್ಥರು ಆಸ್ಪತ್ರೆಗೆ ಆಗಮಿಸಿದ್ದಾರೆ. ಈ ವೇಳೆ ತಬಸ್ಸುಮ್ ನಿತ್ರಾಣ ಸ್ಥೀತಿಯಲ್ಲಿ ಇದ್ದರು ಎನ್ನಲಾಗಿದೆ. ಇನ್ನು ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೆ ಈಕೆ ಸಾವನ್ನಪ್ಪಿದ್ದಾಳೆ. ಈಕೆಯ ತಲೆ ಹಿಂಭಾಗ ಗಾಯವಾಗಿತ್ತು ಎಂದು ಹೇಳಲಾಗಿದ್ದು, ಮೈ ಮೇಲೆ ಸಿಗರೇಟ್ ನಿಂದ ಸುಟ್ಟ ಗಾಯಗಳೂ ಆಗಿವೆ ಎನ್ನಲಾಗಿದೆ. ಹೀಗಾಗಿ ಅತ್ಯಾಚಾರ ಮಾಡಿ ಈಕೆಯನ್ನು ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ಸಂಬಂಧ ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಪೊಲೀಸರು.