ಬೆಂಗಳೂರು: ರೈಲ್ವೆ ಇಲಾಖೆ ಪೊಲೀಸ್ ಎಡಿಜಿಪಿಯಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಭಾಸ್ಕರ್ ರಾವ್ ನಿವೃತ್ತಿಗೆ ಇನ್ನೂ 3 ವರ್ಷ ಬಾಕಿ ಇದ್ದು, ಆದರೆ ಸ್ವಯಂ ನಿವೃತ್ತಿ ಪಡೆಯಲು ನಿರ್ಧರಿಸಿ ಅರ್ಜಿ ಸಲ್ಲಿಸಿದ್ದಾರೆ. ಭಾಸ್ಕರ್ ರಾವ್ ಅವರ ಈ ನಿರ್ಧಾರಕ್ಕೆ ಕಾರಣವೇನು ಎಂಬುದು ತಿಳಿದುಬಂದಿಲ್ಲ.
1990ನೇ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿರುವ ಭಾಸ್ಕರ್ ರಾವ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಕಾರ್ಯನಿರ್ವಹಿಸಿದ್ದರು.