alex Certify ಪೋಷಕರಿಗೆ ಮುಖ್ಯ ಮಾಹಿತಿ: ಮಕ್ಕಳನ್ನು 1 ನೇ ತರಗತಿಗೆ ಸೇರಿಸಲು ಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರಬೇಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರಿಗೆ ಮುಖ್ಯ ಮಾಹಿತಿ: ಮಕ್ಕಳನ್ನು 1 ನೇ ತರಗತಿಗೆ ಸೇರಿಸಲು ಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರಬೇಕು

ಬೆಂಗಳೂರು: ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಒಂದನೇ ತರಗತಿಗೆ ಮಕ್ಕಳನ್ನು ಸೇರಿಸಲು ಕಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರಬೇಕು.

ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಗೆ ಮಕ್ಕಳನ್ನು ದಾಖಲಿಸಲು ಆಯಾ ಶೈಖ್ಷಣಿಕ ವರ್ಷದ ಜೂನ್ ಒಂದಕ್ಕೆ ಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ವಯೋಮಿತಿ ನಿಗದಿಪಡಿಸಲಾಗಿದೆ.

ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದ್ದು, ಪ್ರಸಕ್ತ ವರ್ಷದಲ್ಲಿ ದಾಖಲಾತಿ ಆರಂಭವಾಗಿರುವುದರಿಂದ ಮುಂದಿನ ಶೈಕ್ಷಣಿಕ ವರ್ಷದಿಂದ ಪರಿಷ್ಕೃತ ಆದೇಶ ಜಾರಿಗೆ ಬರಲಿದೆ. ಈ ಹಿಂದೆ 5 ವರ್ಷ 10 ತಿಂಗಳಿನಿಂದ 6 ವರ್ಷ 10 ತಿಂಗಳ ವಯೋಮಿತಿ ನಿಗದಿಪಡಿಸಿದ್ದು, ಈಗ ಎಲ್ಲಾ ಆದೇಶಗಳನ್ನು ಹಿಂಪಡೆಯಲಾಗಿದೆ.

ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ 2009 ಮತ್ತು 2012 ರ ಕಡ್ಡಾಯ ಶಿಕ್ಷಣ ನಿಯಮಗಳ ಅನ್ವಯ ಶಿಕ್ಷಣ ಇಲಾಖೆ ಆಯುಕ್ತರು ಸಲ್ಲಿಸಿದ ಪ್ರಸ್ತಾವನೆಗೆ ಸರ್ಕಾರ ಒಪ್ಪಿಗೆ ನೀಡಿದೆ. 6 ವರ್ಷವಾಗಿದ್ದರೆ ಮಾತ್ರ ಒಂದನೇ ತರಗತಿಗೆ ಪ್ರವೇಶ ನೀಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...