alex Certify 2ನೇ ಬಾರಿ ಕೋವಿಡ್​ ಸೋಂಕಿಗೊಳಗಾದ ಮೆಗಾಸ್ಟಾರ್ ಚಿರಂಜೀವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

2ನೇ ಬಾರಿ ಕೋವಿಡ್​ ಸೋಂಕಿಗೊಳಗಾದ ಮೆಗಾಸ್ಟಾರ್ ಚಿರಂಜೀವಿ

ಮೆಗಾಸ್ಟಾರ್​ ಚಿರಂಜೀವಿ ಮತ್ತೊಮ್ಮೆ ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ. ದಕ್ಷಿಣ ಭಾರತದ ಸೂಪರ್​ ಸ್ಟಾರ್​ ಈ ವಿಚಾರವನ್ನು ಇಂದು ತಿಳಿಸಿದ್ದಾರೆ.

ತಮಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಸೋಶಿಯಲ್​ ಮೀಡಿಯಾಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತಮಗೆ ಸೌಮ್ಯ ಲಕ್ಷಣಗಳು ಗೋಚರವಾಗಿದ್ದು ಮನೆಯಲ್ಲಿಯೇ ಕ್ವಾರಂಟೈನ್​ ಆಗಿದ್ದೇನೆ ಎಂದು ತಿಳಿಸಿದ್ದಾರೆ.

ಎಲ್ಲಾ ಆತ್ಮೀಯರೇ, ಸಾಕಷ್ಟು ಮುಂಜಾಗ್ರತಾ ಕ್ರಮಗಳ ಬಳಿಕವೂ ನಾನು ಸೌಮ್ಯ ಲಕ್ಷಣಗಳೊಂದಿಗೆ ಕೋವಿಡ್​​ ಪಾಸಿಟಿವ್​ ವರದಿಯನ್ನು ಪಡೆದಿದ್ದೇನೆ. ನಾನು ಮನೆಯಲ್ಲಿಯೇ ಕ್ವಾರಂಟೈನ್​ ಆಗಿದ್ದೇನೆ. ನನ್ನ ಜೊತೆ ಯಾರೆಲ್ಲ ಸಂಪರ್ಕಕ್ಕೆ ಬಂದಿದ್ದಿರೋ ಅವರೆಲ್ಲ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡುತ್ತಿದ್ದೇನೆ. ನಿಮ್ಮನ್ನೆಲ್ಲ ಮತ್ತೊಮ್ಮೆ ನೋಡಲು ಕಾತುರನಾಗಿದ್ದೇನೆ ಎಂದು ಟ್ವಿಟರ್​ನಲ್ಲಿ ಚಿರಂಜೀವಿ ಮನವಿ ಮಾಡಿದ್ದಾರೆ.

2020ರ ನವೆಂಬರ್​ ತಿಂಗಳಿನಲ್ಲಿ ಮೆಗಾಸ್ಟಾರ್​ ಚಿರಂಜೀವಿ ಕೋವಿಡ್​ ಸೋಂಕಿಗೆ ಒಳಗಾಗಿದ್ದರು. ಇದಾದ ಬಳಿಕ ಇದೀಗ ಮತ್ತೊಮ್ಮೆ ಕೋವಿಡ್​ ಸೋಂಕಿಗೆ ಒಳಗಾಗಿದ್ದಾರೆ. ಚಿರಂಜೀವಿ ಅಭಿಮಾನಿಗಳು ನೆಚ್ಚಿನ ನಟನ ಶೀಘ್ರ ಚೇತರಿಕೆಗೆ ಪ್ರಾರ್ಥಿಸುತ್ತಿದ್ದಾರೆ.

ಇನ್ನು ನಟ ಚಿರಂಜೀವಿ ʼಆಚಾರ್ಯʼ ಸಿನಿಮಾ ಮೂಲಕ ಈ ವರ್ಷ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ನಿರ್ದೇಶಕ ಕೊರಟಲ ಸಿವಾ ಈ ಸಿನಿಮಾದಲ್ಲಿ ಮೆಗಾಸ್ಟಾರ್​ ಚಿರಂಜೀವಿ ಹಾಗೂ ರಾಮ್​ ಚರಣ್​​ಗೆ ಆ್ಯಕ್ಷನ್​ ಕಟ್​ ಹೇಳಿದ್ದಾರೆ. ಈ ಸಿನಿಮಾವು ಏಪ್ರಿಲ್​ 1ರಂದು ರಿಲೀಸ್​ ಆಗಲಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...