
ಚಂಡೀಗಢ: ಪಂಜಾಬ್‌ನ ತರನ್ ತರನ್ ಜಿಲ್ಲೆಯ ಗೋಯಿಂದ್ವಾಲ್ ಸಾಹಿಬ್ ಸೆಂಟ್ರಲ್ ಜೈಲಿನಲ್ಲಿದ್ದ ಇಬ್ಬರು ಗ್ಯಾಂಗ್ ಸ್ಟರ್ ಗಳನ್ನು ಹತ್ಯೆ ಮಾಡಲಾಗಿದೆ.
ಸೆಂಟ್ರಲ್ ಜೈಲಿನಲ್ಲಿ 2 ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಘಟನೆಯಲ್ಲಿ ಇಬ್ಬರು ಗ್ಯಾಂಗ್ ಸ್ಟರ್ ಗಳಾದ ಮನ್ ದೀಪ್ ಮತ್ತು ಮನಮೋಹನ್ ಅವರನ್ನು ಹತ್ಯೆ ಮಾಡಲಾಗಿದೆ. ಕಳೆದ ವರ್ಷ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆ ಪ್ರಕರಣದಲ್ಲಿ ಭಾಗಿಯಾದವರೊಂದಿಗೆ ಇಬ್ಬರೂ ಸಂಪರ್ಕ ಹೊಂದಿದ್ದರು. ಇತರ ಪ್ರಕರಣಗಳಲ್ಲಿಯೂ ಇವರು ಭಾಗಿಯಾದ ಆರೋಪ ಎದುರಿಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಗುರ್ಮೀತ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಘಟನೆಯಲ್ಲಿ ಒಬ್ಬ ಕೈದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರೂ ಒಂದೇ ಗುಂಪಿಗೆ ಸೇರಿದವರು ಎಂದು ಚೌಹಾಣ್ ತಿಳಿಸಿದ್ದಾರೆ.
ಸಿಧು ಮೂಸೆವಾಲಾ ಎಂದೇ ಖ್ಯಾತರಾಗಿದ್ದ ಶುಭದೀಪ್ ಸಿಂಗ್ ಸಿಧು ಅವರನ್ನು ಮಾನ್ಸಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.