![](https://kannadadunia.com/wp-content/uploads/2018/09/crime.jpg)
ಫತೇಪುರ್: ಉತ್ತರಪ್ರದೇಶದ ಫತೇಪುರ್ ಜಿಲ್ಲೆಯ ಅಶೋಧರ ಪ್ರದೇಶದ ಹಳ್ಳಿಯೊಂದರಲ್ಲಿ ಇಬ್ಬರು ಅಪ್ರಾಪ್ತ ಸಹೋದರಿಯರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
12 ಹಾಗೂ 8 ವರ್ಷದ ಬಾಲಕಿಯರನ್ನು ಹತ್ಯೆ ಮಾಡಲಾಗಿದ್ದು, ಅವರ ದೇಹದ ಮೇಲೆ ಗಾಯದ ಗುರುತುಗಳು ಕಂಡು ಬಂದಿವೆ. ಗ್ರಾಮದ ಹೊರವಲಯದಲ್ಲಿರುವ ಕೊಳದಲ್ಲಿ ಬಾಲಕಿಯರ ಮೃತದೇಹಗಳು ಕಂಡುಬಂದಿವೆ ಎಂದು ಸಹಾಯಕ ಪೊಲೀಸ್ ಅಧೀಕ್ಷಕ ರಾಜೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಬಾಲಕಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಹತ್ಯೆ ಮಾಡಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ.