alex Certify ವೃದ್ಧಾಶ್ರಮದಲ್ಲಿ ಅಗ್ನಿ ಅವಘಡ: ಬೆಂಕಿ ತಗುಲಿ ಇಬ್ಬರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೃದ್ಧಾಶ್ರಮದಲ್ಲಿ ಅಗ್ನಿ ಅವಘಡ: ಬೆಂಕಿ ತಗುಲಿ ಇಬ್ಬರ ಸಾವು

ನವದೆಹಲಿ: ರಾಷ್ಟ್ರ ರಾಜಧಾನಿಯ ಗ್ರೇಟರ್ ಕೈಲಾಶ್-II ಪ್ರದೇಶದಲ್ಲಿ ಭಾನುವಾರ ಮುಂಜಾನೆ ಹಿರಿಯ ನಾಗರಿಕರ ಆರೈಕೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆಯ ಆರು ಮಂದಿ ಗಾಯಗೊಂಡಿದ್ದಾರೆ.

ಬೆಂಕಿಯನ್ನು ನಂದಿಸುವ ವೇಳೆಗೆ ಇಬ್ಬರು ಸಾವನ್ನಪ್ಪಿದ್ದರು ಮತ್ತು ಆರು ಜನರನ್ನು ಇ ಬ್ಲಾಕ್ ಕಟ್ಟಡದಿಂದ ಸ್ಥಳಾಂತರಿಸಲಾಯಿತು. ಬೆಳಿಗ್ಗೆ 5:15 ರ ಸುಮಾರಿಗೆ ಬೆಂಕಿ ತಗುಲಿದ ಬಗ್ಗೆ ದೂರವಾಣಿ ಕರೆ ಮಾಡಲಾಗಿದ್ದು, ನಾಲ್ಕು ಅಗ್ನಿಶಾಮಕ ವಾಹನಗಳು  ಬೆಂಕಿಯನ್ನು ನಂದಿಸಲು ಸ್ಥಳಕ್ಕೆ ಧಾವಿಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಗ್ನಿಶಾಮಕ ದಳ ಮತ್ತು ಪೊಲೀಸರ ತಲಾ ಒಂದು ತಂಡ ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ಪ್ರಾರಂಭಿಸಿತು. ಬೆಳಿಗ್ಗೆ 7 ಗಂಟೆ ಸುಮಾರಿಗೆ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಿಸಲಾಯಿತು ಬೆಂಕಿ ಅವಘಡಕ್ಕೆ ಕಾರಣವನ್ನು ಪತ್ತೆ ಮಾಡಲಾಗುತ್ತಿದೆ. ಹಿರಿಯ ನಾಗರಿಕರು ಮತ್ತು ಅವರ ಪರಿಚಾರಕರು ಸೇರಿದಂತೆ 13 ಜನರನ್ನು ಕಟ್ಟಡದಿಂದ ರಕ್ಷಿಸಲಾಗಿದೆ ಎಂದು ದೆಹಲಿ ಪೊಲೀಸ್ ಕಮಿಷನರ್(ದಕ್ಷಿಣ ದೆಹಲಿ) ಚಂದನ್ ಚೌಧರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...