alex Certify ಡ್ರೈವಿಂಗ್ ವೇಳೆಯಲ್ಲೇ ನಿದ್ದೆಗೆ ಜಾರಿದ ಚಾಲಕ: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರ್; ಇಬ್ಬರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡ್ರೈವಿಂಗ್ ವೇಳೆಯಲ್ಲೇ ನಿದ್ದೆಗೆ ಜಾರಿದ ಚಾಲಕ: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರ್; ಇಬ್ಬರ ಸಾವು

ಲಕ್ನೋ ಎಕ್ಸ್‌ ಪ್ರೆಸ್‌ ವೇಯಲ್ಲಿ ಚಾಲಕ ನಿದ್ರೆಗೆ ಜಾರಿದ ಕಾರಣ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ.

ಭಾನುವಾರ ಬೆಳಗ್ಗೆ ಲಕ್ನೋ ಎಕ್ಸ್‌ ಪ್ರೆಸ್‌ ವೇಯಲ್ಲಿ ಬೆಟ್ಟಿಯಾಗೆ ಹೋಗುತ್ತಿದ್ದ ಕಾರ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದರಿಂದ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಚಾಲಕ ನಿದ್ದೆಗೆ ಜಾರಿದ ಹಿನ್ನೆಲೆಯಲ್ಲಿ ಕಾರ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.

ಮೊಹಮ್ಮದ್ ಅಜರುದ್ದೀನ್ ಎಂಬ ಚಾಲಕ ತನ್ನ ತಂದೆ ಮೊಹಮ್ಮದ್ ಯಾಸಿನ್ ಅನ್ಸಾರಿ, ಅವರ ಪತ್ನಿ ಇನ್ಯಾರಾ ಖಾತೂನ್, ಅವರ ಮಗಳು ಸಾಯಿರಾ ಮತ್ತು ಅವರ ಸಹೋದರ ನಸೀಮುದ್ದೀನ್ ಅನ್ಸಾರಿ ಅವರೊಂದಿಗೆ ಪ್ರಯಾಣಿಸುತ್ತಿದ್ದರು.

ಆತನ ತಂದೆ ಮತ್ತು ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಪೊಲೀಸರು ಚಾಲಕ ಸೇರಿದಂತೆ ಇತರ ಮೂವರು ಪ್ರಯಾಣಿಕರನ್ನು ಆಂಬ್ಯುಲೆನ್ಸ್ ಮೂಲಕ ಪಿಜಿಐ ಸೈಫೈಗೆ ಸಾಗಿಸಿದರು. ಅಪಘಾತದಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸಂಪೂರ್ಣ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...