
ಮಂಗಳವಾರ ಸಂಜೆ ಈ ಘಟನೆ ವರದಿಯಾಗಿದ್ದರೂ, ಇಡೀ ಘಟನೆಯ ವಿಡಿಯೋ ವೈರಲ್ ಆದ ನಂತರ ಅದು ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ವೈರಲ್ ಆದ ನಂತರ ಪೊಲೀಸರು ಏಳು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಬಸ್ಸಿಗಾಗಿ ಕಾಯುತ್ತಿದ್ದ ಹುಡುಗಿಯರನ್ನು ಚುಡಾಯಿಸಿದ ಯುವಕರು
ಮಾಹಿತಿ ಪ್ರಕಾರ, ಕೋಚಿಂಗ್ ಮುಗಿಸಿ ಮನೆಗೆ ತೆರಳಲು ಬಸ್ ಗಾಗಿ ಕಾಯುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು ಇಬ್ಬರು ಯುವಕರು ಚುಡಾಯಿಸಿದ್ದಾರೆ. ವಿದ್ಯಾರ್ಥಿನಿಯರು ಪ್ರತಿಭಟಿಸಲು ಮುಂದಾದಾಗ, ಯುವಕರು ಬೆದರಿಕೆ ಹಾಕಿದ್ದಾರೆ. ಇದನ್ನು ಗಮನಿಸಿದ ಸ್ಥಳದಲ್ಲಿದ್ದ ಜನರು ದುಷ್ಕರ್ಮಿಗಳಿಬ್ಬರನ್ನೂ ಹಿಡಿದು ಥಳಿಸಿದ್ದಾರೆ.
ಇನ್ನು ಈ ವಿಚಾರ ತಿಳಿಯುತ್ತಿದ್ದಂತೆ ಕೂಡಲೇ ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು, ಇಬ್ಬರನ್ನೂ ಠಾಣೆಗೆ ಕರೆದೊಯ್ದಿದ್ದಾರೆ. ಇಬ್ಬರೂ ದುಷ್ಕರ್ಮಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದರೊಂದಿಗೆ ಆರೋಪಿಗಳ ಮೇಲೆ ಹಲ್ಲೆ ನಡೆಸಿ ತಲೆಗೂದಲು ಕತ್ತರಿಸಿದ ಏಳು ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವೈರಲ್ ಆದ ವಿಡಿಯೋ ಆಧರಿಸಿ ಪೊಲೀಸರು ಹಲ್ಲೆ ನಡೆಸಿದವರ ಪತ್ತೆಗೆ ಮುಂದಾಗಿದ್ದಾರೆ.