ವಿಮಾನ ಒಂದು ಟೀಕ್ ಆಫ್ ಆಗುವಾಗಲೇ ರನ್ ವೇನಲ್ಲಿ ಟ್ರಕ್ ಒಂದಕ್ಕೆ ಡಿಕ್ಕಿ ಹೊಡೆದಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬೆಚ್ಚಿಬೀಳಿಸುವಂತಿದೆ.
ಘಟನೆ ಶುಕ್ರವಾರದಂದು ಪೆರುವಿನ Jorge Chavez ವಿಮಾನ ನಿಲ್ದಾಣದಲ್ಲಿ ನಡೆದಿದ್ದು, 102 ಪ್ರಯಾಣಿಕರು ಹಾಗೂ 6 ಮಂದಿ ಸಿಬ್ಬಂದಿ ಇದ್ದ A320 ವಿಮಾನ ಟ್ರಕ್ ಗೆ ಡಿಕ್ಕಿ ಹೊಡೆದಿದೆ.
ಇದರಿಂದಾಗಿ ಟ್ರಕ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, ಅದೃಷ್ಟವಶಾತ್ ವಿಮಾನ ಪ್ರಯಾಣಿಕರು ಹಾಗೂ ಸಿಬ್ಬಂದಿ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಒಂದೊಮ್ಮೆ ವಿಮಾನ ಸ್ಪೋಟಿಸಿದ್ದರೆ ನೂರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದರು ಎನ್ನಲಾಗಿದೆ.