ದಾವಣಗೆರೆ : ಯಮಧೂತ ಟಿಪ್ಪರ್ ಹರಿದು 2 ವರ್ಷದ ಕಂದಮ್ಮ ಮೃತಪಟ್ಟ ಘಟನೆ ದಾವಣಗೆರೆ ನಗರದ ಕುಂದುವಾಡದಲ್ಲಿ ನಡೆದಿದೆ.
ಮೃತ ಮಗುವನ್ನು 2 ವರ್ಷದ ಚರಸ್ವಿ ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಟಿಪ್ಪರ್ ಮಗುವಿನ ಮೇಲೆ ಹರಿದಿದೆ ಎನ್ನಲಾಗಿದೆ. ಅಂಗನವಾಡಿಯಿಂದ ಮಗು ಮನೆಗೆ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ಹಿನ್ನೆಲೆ ಆಕ್ರೋಶಗೊಂಡ ಬಾಲಕಿಯ ಪೋಷಕರು ಹಾಗೂ ಸ್ಥಳೀಯರು ರಸ್ತೆ ಬಂದ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಟಿಪ್ಪರ್ ಚಾಲಕನನ್ನು ಬಂಧಿಸುವಂತೆ ಪ್ರತಿಭಟನೆ ನಡೆಸಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಟಿಪ್ಪರ್ ಚಾಲಕನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.