ದಾವಣಗೆರೆ : ದಾವಣಗೆರೆ ಜಿಲ್ಲಾದ್ಯಂತ ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಪದ್ಧತಿ ನಿರ್ಮೂಲನೆ ವಿವಿಧ ಅಂಗಡಿ, ಹೋಟೆಲ್, ಗ್ಯಾರೇಜ್, ಬಾರ್ ಮತ್ತು ರೆಸ್ಟೋರೆಂಟ್ ಹಾಗೂ ವಾಣಿಜ್ಯ ಸಂಸ್ಥೆಗಳು ಹಾಗೂ ಮಂಡಕ್ಕಿ ಭಟ್ಟಿ, ಇಟ್ಟಂಗಿ ಭಟ್ಟಿಕಲ್ಲಿನ ಕೋರೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುತ್ತಿರುವುದು ಕಂಡು ಬರುತ್ತಿದೆ.
18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಹಾಗೂ ಸಂಜ್ಞೆಯ(ವಾರೆಂಟ್ರಹಿತ ಬಂದಿಸಬಹುದಾದ) ಅಪರಾಧವಾಗಿದೆ. ಹಾಗೂ ಕೆಲಸಕ್ಕೆ ನೇಮಿಸಿಕೊಂಡಲ್ಲಿ ಅಂತಹ ಮೊದಲ ಅಪರಾಧಕ್ಕೆ ಮಾಲೀಕರಿಗೆ 6 ತಿಂಗಳಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ರೂ.20,000/- ರಿಂದ ರೂ.50,000/- ಗಳ ವರೆಗೆ ದಂಡ ಅಥವಾ ಎರಡನ್ನೂ ವಿಧಿಸಲಾಗುವುದು. ಪುನರಾವರ್ತಿತ ಅಪರಾಧಕ್ಕೆ 1 ವರ್ಷದಿಂದ 3 ವರ್ಷಗಳವರೆಗೆ ಜೈಲುಶಿಕ್ಷೆ, ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ ಪದ್ಧತಿಯನ್ನು ಪ್ರೋತ್ಸಾಹಿಸುವ ಪೋಷಕರಿಗೂ ಸಹ ಲಘು ಶಿಕ್ಷಾ ಅವಕಾಶವಿದ್ದು, ಪುನರಾವರ್ತಿತ ಅಪರಾಧಕ್ಕೆ ರೂ. 10,000/-ಗಳ ದಂಡ. 14 ವರ್ಷದೊಳಗಿನ ಮಕ್ಕಳು ಯಾವುದೇ ಉದ್ಯೋಗ ಅಥವಾ ಪ್ರಕ್ರಿಯೆಗಳಲ್ಲಿ ಹಾಗೂ 18 ವರ್ಷ ವಯಸ್ಸಿನವೆರೆಗಿನ ಕಿಶೋರರು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸ ಮಾಡುವುದು ಕಂಡು ಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ-1098, ಕಾರ್ಮಿಕ ಇಲಾಖೆ 08192-230094-237332 ಸಂಪರ್ಕಿಸಲು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.