alex Certify 20 ಜನ ಶಾಸಕರು, 10 ಜನ ಸಚಿವರಿಗೆ ವಕ್ಕರಿಸಿದ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

20 ಜನ ಶಾಸಕರು, 10 ಜನ ಸಚಿವರಿಗೆ ವಕ್ಕರಿಸಿದ ಸೋಂಕು

ಮುಂಬಯಿ : ಮಹಾರಾಷ್ಟ್ರದಲ್ಲಿ ಕೊರೊನಾ ಹಾಗೂ ಹೊಸ ರೂಪಾಂತರಿಯ ಅಟ್ಟಹಾಸ ಮಿತಿ ಮೀರುತ್ತಿದ್ದು, ಸದ್ಯ ಅಲ್ಲಿನ 20 ಜನ ಶಾಸಕರು ಹಾಗೂ 10 ಜನ ಸಚಿವರಿಗೆ ಸೋಂಕು ವಕ್ಕರಿಸಿದೆ.

ಓಮಿಕ್ರಾನ್ ಸೋಂಕಿನ ಸಂಖ್ಯೆಯೂ ಅಲ್ಲಿ ಏರಿಕೆ ಕಾಣುತ್ತಿದ್ದು, ಇಲ್ಲಿಯವರೆಗೂ 454 ಜನರಲ್ಲಿ ಅಲ್ಲಿ ಹೊಸ ರೂಪಾಂತರಿ ಕಾಣಿಸಿಕೊಂಡಿದೆ. ದಿನದಿಂದ ದಿನಕ್ಕೆ ಪ್ರಕರಣಗಳ ಏರಿಕೆಯಾಗುತ್ತಿದ್ದು, ಸದ್ಯ ಶೇ.35ರಷ್ಟು ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಹೇಳಿದ್ದಾರೆ.

ಶಾಲೆಯಲ್ಲಿ ಗುಂಡು, ತುಂಡು ಪಾರ್ಟಿ; ಶಾಲೆಯಲ್ಲಿದ್ದ ವಸ್ತುಗಳನ್ನೆಲ್ಲ ದೋಚಿದ ಖದೀಮರು

ಕೊರೊನಾ ಹಾಗೂ ಹೊಸ ರೂಪಾಂತರಿಯ ಸೋಂಕು ಹೆಚ್ಚಳದಿಂದಾಗಿ ಮಹಾರಾಷ್ಟ್ರದಲ್ಲಿ ಮತ್ತೆ ಲಾಕ್ ಡೌನ್ ನ ಮಾತುಗಳು ಕೇಳಿ ಬರುತ್ತಿವೆ. ಇದರ ಮಧ್ಯೆ ಶಾಸಕರು ಹಾಗೂ ಸಚಿವರಿಗೂ ಈ ಸೋಂಕು ವಕ್ಕರಿಸಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗುತ್ತಿದೆ.

ಜನಪ್ರತಿನಿಧಿಗಳು ಸೋಂಕಿನಿಂದ ಕ್ವಾರಂಟೈನ್ ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದರೆ, ಆಡಳಿತ ಯಂತ್ರ ಕುಸಿಯುತ್ತದೆ. ಆಗ ಸಹಜವಾಗಿ ಜನ ಸಾಮಾನ್ಯರಿಗೆ ತೊಂದರೆಯಾಗಲಿದೆ. ಹೀಗಾಗಿಯೇ ಕಟ್ಟುನಿಟ್ಟಿನ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕೆಂದು ಹಲವರು ಮಹಾರಾಷ್ಟ್ರದಲ್ಲಿ ಮನವಿ ಮಾಡುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...