alex Certify BIG NEWS : ‘PUC’ ಪರೀಕ್ಷೆಗಳಿಗೆ 20 ಆಂತರಿಕ ಅಂಕ ಕಡ್ಡಾಯ : ರಾಜ್ಯ ಸರ್ಕಾರ ಅಧಿಕೃತ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘PUC’ ಪರೀಕ್ಷೆಗಳಿಗೆ 20 ಆಂತರಿಕ ಅಂಕ ಕಡ್ಡಾಯ : ರಾಜ್ಯ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು : 2023-24ನೇ ಶೈಕ್ಷಣಿಕ ಸಾಲಿನಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಹೊಂದಿರದ ವಿಷಯಗಳಲ್ಲಿ 20 ಆಂತರಿಕ ಅಂಕಗಳನ್ನು ಪರೀಕ್ಷೆಗೆ ನಿಗದಿಪಡಿಸಿ ಆದೇಶಿಸಿದೆ.

ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು, 2023-24ನೇ ಶೈಕ್ಷಣಿಕ ಸಾಲಿನಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಹೊಂದಿರದ ವಿಷಯಗಳಲ್ಲಿ 20 ಆಂತರಿಕ ಅಂಕಗಳನ್ನು ಪರೀಕ್ಷೆಗೆ ಪರಿಗಣಿಸುವ ಬಗ್ಗೆ ಸೂಕ್ತ ಆದೇಶ ಹೊರಡಿಸುವಂತೆ ಮೇಲೆ ಓದಲಾದ ಏಕ ಕಡತದಲ್ಲಿ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆರವರು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ. ಈ ಹಿನ್ನೆಲೆ 2023-24ನೇ ಶೈಕ್ಷಣಿಕ ಸಾಲಿನಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಹೊಂದಿರದ ವಿಷಯಗಳಲ್ಲಿ 20 ಆಂತರಿಕ ಅಂಕಗಳನ್ನು ಪರೀಕ್ಷೆಗೆ ನಿಗದಿಪಡಿಸಿ ಆದೇಶಿಸಿದೆ. ಸದರಿ ಅಂಕಗಳನ್ನು ಆಯಾ ಉಪನ್ಯಾಸಕರು ವಿದ್ಯಾರ್ಥಿಗಳ ಮೌಲ್ಯಮಾಪನ ಮಾಡಿ ದಾಖಲಿಸಬೇಕಾಗುತ್ತದೆ ಹಾಗೂ 20 ಅಂಕಗಳನ್ನು ನೀಡುವ ವಿಧಾನವನ್ನು ಈ ಕೆಳಕಂಡಂತೆ ನಿರ್ಧರಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಆಂತರಿಕ ಮೌಲ್ಯ ಮಾಪನವು ಸಮಗ್ರ ಮೌಲ್ಯಮಾಪನದ ಭಾಗವಾಗಿದೆ. ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಅರ್ಥೈಸಿಕೊಳ್ಳಲು ಸಹಕಾರ ನೀಡುತ್ತದೆ. ತರಗತಿ ಕಿರುಪರೀಕ್ಷೆ ಹಾಗೂ ಇದು ಮಧ್ಯವಾರ್ಷಿಕ ಪರೀಕ್ಷೆಗಳ ಬಗ್ಗೆ ಗಂಭೀರತೆಯನ್ನು ಹೆಚ್ಚಿಸುತ್ತದೆ. ಆಂತರಿಕ ಮೌಲ್ಯಮಾಪನದಿಂದ ಪರೀಕ್ಷಾ ಭಯ ಹಾಗೂ ಒತ್ತಡ ಕಡಿಮೆಯಾಗುತ್ತದೆ. ವಿದ್ಯಾರ್ಥಿಗಳ ಕ್ರಿಯಾಶೀಲತೆಯನ್ನು ಹೆಚ್ಚಿಸಿ ಅವರಲ್ಲಿ ಕಂಡುಬರುವ ವೃತ್ತಿಪರ ಕೌಶಲಗಳು ಅವರನ್ನು ಮುಂದಿನ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಿಸಲು ಅವಕಾಶ ನೀಡುತ್ತದೆ. ವಿದ್ಯಾರ್ಥಿಗಳ ಅವಲೋಕನ ನಿರಂತರವಾಗಿದ್ದು ಕಲಿಕೆಯನ್ನು ಉತ್ತಮಗೊಳಿಸಲು ಅವಕಾಶ ನೀಡುತ್ತದೆ. ಎಲ್ಲಾ ವಿಷಯಗಳಿಗೆ ಆಂತರಿಕ ಅಂಕಗಳನ್ನು ನೀಡುವ ಮಾದರಿಯನ್ನು ಅನುಸರಿಸಿದ್ದಲ್ಲಿ ಏಕರೂಪತೆಯನ್ನು ತರಬಹುದಾಗಿದೆ. ಈ ಹಿನ್ನೆಲೆಯಲ್ಲಿ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆರವರ ಏಕ ಕಡತದ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ, ಸರ್ಕಾರವು ಈ ಆದೇಶ ಹೊರಡಿಸಿದೆ ಎಂದು ಸುತ್ತೋಲೆ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...