ಬೆಂಗಳೂರು : ಬೌದ್ಧ ಆಧ್ಯಾತ್ಮಿಕ ಗ್ರಂಥಾಲಯ ನವೀಕರಣಕ್ಕೆ 20 ಲಕ್ಷ ಅನುದಾನದ ನೆರವು ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಬೆಂಗಳೂರಿನ ಮಹಾಬೋಧಿ ಲುಂಬಿನಿ ಬುದ್ಧ ವಿಹಾರ ಸಂಸ್ಥೆಯವರು ನಗರದ ಮಹಾಭೋದಿ ಸಂಶೋಧನಾ ಕೇಂದ್ರದ ಬೌದ್ಧ ಜನಾಂಗದ ಅಧ್ಯಾತ್ಮಿಕ ಗ್ರಂಥಾಲಯದ ನವೀಕರಣಕ್ಕಾಗಿ ₹ 2೦ ಲಕ್ಷ ಅನುದಾನ ಕೋರಿ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
2024-25 ನೇ ಆಯವ್ಯಯದಲ್ಲಿ ಬೌದ್ಧ ಸಮುದಾಯದ ಅಭಿವೃದ್ಧಿಗಾಗಿ ₹ 1೦೦ ಕೋಟಿ ಅನುದಾನ ಹಾಗೂ ಬೌದ್ಧ ಜನಾಂಗಕ್ಕೆ ಪ್ರತ್ಯೇಕ ನಿಗಮ ಮಂಡಳಿ ರಚಿಸುವಂತೆ ಕೋರಿ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು ಪರಿಶೀಲಿಸುವುದಾಗಿ ಭರವಸೆ ನೀಡಿದರು.
ಆಡಳಿತ ಜನರ ಬಳಿಗೆ ಹೋಗಬೇಕು, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವುದು ಸರ್ಕಾರದ ಆಶಯವಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಖುದ್ದಾಗಿ ಅಹವಾಲುಗಳನ್ನು ಆಲಿಸಿ ಪರಿಹಾರ ಒದಗಿಸುವ ಸಲುವಾಗಿ ಜನಸ್ಪಂದನ ಕಾರ್ಯಕ್ರಮ ನಡೆಸುತ್ತಿದ್ದಾರೆ.