alex Certify ಮನೆಗೆ ಡ್ರಾಪ್ ಕೊಡೋದಾಗಿ ನಂಬಿಸಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ…..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಗೆ ಡ್ರಾಪ್ ಕೊಡೋದಾಗಿ ನಂಬಿಸಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ…..!

ನಿರ್ಜನ ಆಸ್ಪತ್ರೆ ಕಟ್ಟಡದಲ್ಲಿ 20 ವರ್ಷದ ಯುವತಿಯ ಮೇಲೆ ಐವರು ಕಾಮುಕರು ಸಾಮೂಹಿಕ ಅತ್ಯಾಚಾರಗೈದ ದಾರುಣ ಘಟನೆಯು ತೆಲಂಗಾಣದ ನಿಜಾಮಾಬಾದ್​ನಲ್ಲಿ ನಡೆದಿದೆ. ಈ ಸಂಬಂಧ ತನಿಖೆ ನಡೆಸಿದ ಪೊಲೀಸರು ಐವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಐವರು ಆರೋಪಿಗಳ ವಿರುದ್ಧ, ಸಾಮೂಹಿಕ ಅತ್ಯಾಚಾರ ತಡೆ, ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಹಲವು ದಂಡ ಸಂಹಿತೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದರಲ್ಲಿ ಮೂವರು ಆರೋಪಿಗಳು ಯುವತಿಯ ಮೇಲೆ ಅತ್ಯಾಚಾರಗೈದಿದ್ದರೆ ಇನ್ನಿಬ್ಬರು ಈ ಕೃತ್ಯಕ್ಕೆ ಕುಮ್ಮಕ್ಕು ನೀಡಿದ್ದರು ಎನ್ನಲಾಗಿದೆ.

ಈ ಆರೋಪಿಗಳಲ್ಲಿ ಓರ್ವ ಸಂತ್ರಸ್ತೆಯ ಸ್ನೇಹಿತನಾಗಿದ್ದು ಆತ ಮನೆಗೆ ಡ್ರಾಪ್ ಕೊಡುತ್ತೇನೆ ಎಂದು ಹೇಳಿದ್ದರಿಂದ ಆತನನ್ನು ನಂಬಿ ಬೈಕ್​ ಏರಿದ್ದಳು. ಆದರೆ ಆತ ನಿಜಾಮಾಬಾದ್​ ಡ್ರೈವ್​ ಹೋಗೋಣ ಎಂದು ಹೇಳಿ ಬಳಿಕ ಈ ಆಸ್ಪತ್ರೆ ಕಟ್ಟಡಕ್ಕೆ ಕರೆದುಕೊಂಡು ಹೋಗಿದ್ದಾನೆ. ಇಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಳಕೆಯಾಗದೇ ಹಾಗೆಯೇ ಇದ್ದ ಆಸ್ಪತ್ರೆ ಕಟ್ಟಡದ ವಾಚ್​ಮನ್​ ಕೋಣೆಯಲ್ಲಿ ಯುವತಿಯ ಮೇಲೆ ಅತ್ಯಾಚಾರ ಎಸೆಗಲಾಗಿದೆ. ಪ್ರಕರಣ ಸಂಬಂಧ ಐವರನ್ನೂ ಜೈಲಿಗಟ್ಟಲಾಗಿದ್ದು ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...