ಬೆಂಗಳೂರು : ರಾಜ್ಯದಲ್ಲಿನ ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮಿ ಯೋಜನೆಯ ನೆರವು ದೊರೆಯುತ್ತಿದ್ದು, ಸೌಲಭ್ಯ ದೊರೆಯದ ಬಗ್ಗೆ ಯಾವುದೇ ದೂರು ಸಲ್ಲಿಕೆಯಾಗಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ದೇವದಾಸಿ ಮಹಿಳೆಯರಿಗೆ ಮಾಸಾಶನ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ₹2,000, ಆರ್ಥಿಕ ಸಹಾಯ ಯೋಜನೆಯಡಿ ₹30,000 ಸಹಾಯಧನ ಹಾಗೂ ಮಾಜಿ ದೇವದಾಸಿ ವಸತಿ ಯೋಜನೆಯಡಿ ವಸತಿ ಸೌಲಭ್ಯ ಒದಗಿಸಲಾಗುತ್ತಿದೆ. ಅಂತೆಯೇ ದೇವದಾಸಿ ಪದ್ಧತಿಯನ್ನು ಬೇರು ಸಮೇತ ಕಿತ್ತೊಗೆಯಲು ಪ್ರಯತ್ನಿಸಲಾಗುವುದು.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉತ್ತರ ನೀಡಿದ್ದಾರೆ.
ರಾಜ್ಯದಲ್ಲಿನ ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮಿ ಯೋಜನೆಯ ನೆರವು ದೊರೆಯುತ್ತಿದ್ದು, ಸೌಲಭ್ಯ ದೊರೆಯದ ಬಗ್ಗೆ ಯಾವುದೇ ದೂರು ಸಲ್ಲಿಕೆಯಾಗಿಲ್ಲ .
ದೇವದಾಸಿ ಮಹಿಳೆಯರಿಗೆ ಮಾಸಾಶನ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ₹2,000, ಆರ್ಥಿಕ ಸಹಾಯ ಯೋಜನೆಯಡಿ ₹30,000 ಸಹಾಯಧನ ಹಾಗೂ ಮಾಜಿ ದೇವದಾಸಿ ವಸತಿ ಯೋಜನೆಯಡಿ ವಸತಿ ಸೌಲಭ್ಯ… pic.twitter.com/GmLmzYtEHn
— DIPR Karnataka (@KarnatakaVarthe) December 13, 2024