alex Certify ಎಂಪಿಎಂಗೆ 20,000 ಹೆಕ್ಟೇರ್ ಅರಣ್ಯ ಪ್ರದೇಶ 40 ವರ್ಷಗಳಿಗೆ ಗುತ್ತಿಗೆ ಪ್ರಸ್ತಾಪ ಕೇಂದ್ರದ ಮುಂದಿಲ್ಲ: ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಂಪಿಎಂಗೆ 20,000 ಹೆಕ್ಟೇರ್ ಅರಣ್ಯ ಪ್ರದೇಶ 40 ವರ್ಷಗಳಿಗೆ ಗುತ್ತಿಗೆ ಪ್ರಸ್ತಾಪ ಕೇಂದ್ರದ ಮುಂದಿಲ್ಲ: ಸ್ಪಷ್ಟನೆ

ನವದೆಹಲಿ: ಭದ್ರಾವತಿ ಎಂಪಿಎಂ ಕಾರ್ಖಾನೆಗೆ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳ 20,000 ಹೆಕ್ಟೇರ್ ಅರಣ್ಯ ಪ್ರದೇಶವನ್ನು 40 ವರ್ಷಗಳಿಗೆ ಗುತ್ತಿಗೆ ನೀಡುವ ಪ್ರಸ್ತಾಪ ಕೇಂದ್ರದ ಮುಂದಿಲ್ಲ ಎಂದು ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ ಸ್ಪಷ್ಟನೆ ನೀಡಿದೆ.

ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ಇಲಾಖೆಯ ರಾಜ್ಯ ಸಚಿವ ಕೀರ್ತಿವರ್ಧನ್ ಸಿಂಗ್ ಉತ್ತರ ನೀಡಿದ್ದಾರೆ.

ಅರಣ್ಯ ಭೂಮಿಯನ್ನು ಅರಣ್ಯೇತರ ಉದ್ದೇಶಕ್ಕೆ ಬಳಸಲು ಅನುಮತಿ ಕೋರಿ ರಾಜ್ಯ ಸರ್ಕಾರ ಪರಿವೇಷ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕು. ಆದರೆ, ಗುತ್ತಿಗೆ ನವೀಕರಣ ಮಾಡುವಂತೆ ಕೋರಿ ಕರ್ನಾಟಕ ಸರ್ಕಾರ ಇದುವರೆಗೆ ಪ್ರಸ್ತಾಪ ಸಲ್ಲಿಸಿಲ್ಲ ಎಂದು ತಿಳಿಸಿದ್ದಾರೆ.

1980ರಲ್ಲಿ ಭದ್ರಾವತಿ ಎಂಪಿಎಂ ಕಾರ್ಖಾನೆಗೆ 40 ವರ್ಷಗಳ ಸೀಮಿತ ಅವಧಿಗೆ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಿಗೆ ಸೇರಿದ ಅರಣ್ಯ ಪ್ರದೇಶ ಗುತ್ತಿಗೆ ನೀಡಿದ್ದು, 2020 ರಲ್ಲಿ ಗುತ್ತಿಗೆ ಅವಧಿ ಮುಗಿದಿದೆ. ಮತ್ತೆ 40 ವರ್ಷ ಅವಧಿಗೆ ಗುತ್ತಿಗೆ ನೀಡಲು ಸರ್ಕಾರ 2020 ರಲ್ಲಿ ಒಪ್ಪಿಗೆ ನೀಡಿತ್ತು. ಆ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಅನುಮೋದನೆ ಪಡೆದಿರಲಿಲ್ಲ.

ನಂತರ ಪ್ರಸ್ತಾವವನ್ನು ಕೇಂದ್ರಕ್ಕೆ ಕಳುಹಿಸಲಾಗಿದ್ದು, ಅರಣ್ಯ ಸಂರಕ್ಷಣಾ ಕಾಯ್ದೆ 1980ರ ಉಲ್ಲಂಘನೆಯಾಗಿದೆ ಎಂದು ಕೇಂದ್ರ ಪರಿಸರ ಸಚಿವಾಲಯ ತಕರಾರು ಎತ್ತಿತ್ತು. ಕಾರ್ಖಾನೆ ಪರ ನಿಲುವು ತಳೆದ ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿತ್ತು. ಕಾರ್ಖಾನೆಯ ನಿರ್ವಹಣೆ ಯೋಜನೆಗೂ ಕೂಡ ಒಪ್ಪಿಗೆ ನೀಡಿರಲಿಲ್ಲ.

ಕಳೆದ ತಿಂಗಳು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಅವರನ್ನು ಭೇಟಿಯಾಗಿ ಅರಣ್ಯ ಪ್ರದೇಶ ಗುತ್ತಿಗೆ ನೀಡಲು ಅನುಮೋದನೆ ನೀಡುವಂತೆ ಮನವಿ ಮಾಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...