ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮ ಮಂದಿರವು 2024ರ ಜನವರಿ 1ರ ವೇಳೆಗೆ ಸಿದ್ದವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಬುಧವಾರದಂದು ತ್ರಿಪುರಾದಲ್ಲಿ ನಡೆದ ಬಿಜೆಪಿ ರಾಲಿ ಸಂದರ್ಭದಲ್ಲಿ ಮಾತನಾಡಿದ ಅವರು 2019ರಲ್ಲಿ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡುವ ಮೂಲಕ ರಾಮ ಮಂದಿರ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿಕೊಟ್ಟಿದೆ ಎಂದು ತಿಳಿಸಿದರು.
ಈಗ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಮುಂದಿನ ವರ್ಷದ ಜನವರಿ ವೇಳೆಗೆ ಪೂರ್ಣಗೊಂಡು ಭಕ್ತರ ದರ್ಶನಕ್ಕೆ ತೆರೆದುಕೊಳ್ಳಲಿದೆ ಎಂದು ಹೇಳಿದರು.