ಸಚಿವ ಉಮೇಶ್ ಕತ್ತಿ ಮೊದಲಿನಿಂದಲೂ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂಬ ವಿಚಾರವನ್ನು ಪ್ರತಿಪಾದಿಸುತ್ತಿದ್ದಾರೆ. ಇದೀಗ ಅವರು ಈ ಮಾತನ್ನು ಪುನರುಚ್ಚರಿಸಿದ್ದಾರೆ.
ಬೆಳಗಾವಿಯಲ್ಲಿ ಬಾರ್ ಅಸೋಸಿಯೇಷನ್ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2024ರ ಲೋಕಸಭಾ ಚುನಾವಣೆ ಬಳಿಕ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದು ಹೇಳಿದ್ದಾರೆ.
ಧಾರವಾಡದಲ್ಲಿ ಈಗಾಗಲೇ ಹೈಕೋರ್ಟ್ ಪೀಠ ಆಗಿದೆ. ಬೆಳಗಾವಿಯಲ್ಲಿ ವಿಧಾನಸೌಧ ಇದೆ. ಜೊತೆಗೆ ಗ್ರಾಹಕರ ನ್ಯಾಯಾಲಯವೂ ಬೆಳಗಾವಿಯಲ್ಲಿ ಆರಂಭವಾಗುತ್ತಿದ್ದು, ಮೂಲಸೌಕರ್ಯಗಳೆಲ್ಲ ಲಭ್ಯವಾಗುವ ಕಾರಣ ಎಲ್ಲರೂ ಸೇರಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮಾಡೋಣ ಎಂದಿದ್ದಾರೆ.