alex Certify BIG NEWS: ಪ್ರೀತಿಸುವಂತೆ ಯುವಕನಿಂದ ಕಿರುಕುಳ; ಮನನೊಂದ ಯುವತಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರೀತಿಸುವಂತೆ ಯುವಕನಿಂದ ಕಿರುಕುಳ; ಮನನೊಂದ ಯುವತಿ ಆತ್ಮಹತ್ಯೆ

ಹಾಸನ: ಯುವಕನೊಬ್ಬ ಪ್ರೀತಿಸುವಂತೆ ಯುವತಿಗೆ ನಿರಂತರವಾಗಿ ಕಿರುಕುಳ ಕೊಟ್ಟು, ಕೊಲೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.

21 ವರ್ಷದ ಸಂಗೀತಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ನಿಡಗೂಡು ಗ್ರಾಮದ ಸಂಗೀತಾ ಬಿ.ಕಾಂ ಮುಗಿಸಿ ಮನೆಯಲ್ಲಿಯೇ ಇದ್ದಳು. ಶಿವು ಎಂಬ ಯುವಕ ತನ್ನನ್ನು ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ.

ಸಂಗೀತಾಳಿಗೆ ಅವಾಚ್ಯವಾಗಿ ನಿಂದಿಸಿ, ತನ್ನನ್ನು ಪ್ರೀತಿಸದಿದ್ದರೆ ಕೊಲೆ ಮಡುವುದಾಗಿ ಬೆದರಿಕೆ ಹಾಕಿದ್ದ. ಯುವಕನ ಕಾಟಕ್ಕೆ ಬೇಸತ್ತ ಸಂಗೀತಾ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬೇಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...