alex Certify BREAKING : ಶಾಲೆಗಳಲ್ಲಿ ಮಧ್ಯಾಹ್ನದ ‘ಬಿಸಿಯೂಟ’ ಯೋಜನೆಗೆ ಕೇಂದ್ರ-ರಾಜ್ಯ ಸರ್ಕಾರದಿಂದ 212 ಕೋಟಿ ಅನುದಾನ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಶಾಲೆಗಳಲ್ಲಿ ಮಧ್ಯಾಹ್ನದ ‘ಬಿಸಿಯೂಟ’ ಯೋಜನೆಗೆ ಕೇಂದ್ರ-ರಾಜ್ಯ ಸರ್ಕಾರದಿಂದ 212 ಕೋಟಿ ಅನುದಾನ ಬಿಡುಗಡೆ

ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಒಟ್ಟು 212 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ.

ಕೇಂದ್ರ ಸರ್ಕಾರದಿಂದ 131 ಕೋಟಿ ಹಾಗೂ ರಾಜ್ಯ ಸರ್ಕಾರದಿಂದ 81 ಕೋಟಿ ರೂ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಒಟ್ಟಾರೆ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಕೇಂದ್ರ- ರಾಜ್ಯ ಸರ್ಕಾರದಿಂದ 212 ಕೋಟಿ ಅನುದಾನ ಸಿಕ್ಕಂತಾಗಿದೆ.

ಬಿಸಿಯೂಟ ಯೋಜನೆಗೆ ಸರ್ಕಾರದಿಂದ ಹಣ ಬಿಡುಗಡೆ ಆಗಿಲ್ಲ, ಎಂದು ಶಿಕ್ಷಕರು ಸರ್ಕಾರಕ್ಕೆ ಮೊರೆಯಿಟ್ಟಿದ್ದರು. 2002-03ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರವು ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ರಾಜ್ಯಾದ್ಯಂತ ಆರಂಭಿಸಿತು. ಶಾಲಾ ಮಕ್ಕಳಿಗೆ ಉತ್ತಮ ಪೋಷಕಾಂಶ ಭರಿತ ಆಹಾರವನ್ನು ಒದಗಿಸುವ ದೃಷ್ಟಿಯಿಂದ ಮೊಟ್ಟೆ, ಹಾಲು ಕೂಡ ನೀಡುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...