alex Certify 22 ವರ್ಷಗಳ ಕಾಲ ಸೇನೆಯಲ್ಲಿ ಸೇವೆ; ನಿವೃತ್ತಿ ಬಳಿಕ ಸ್ವಗ್ರಾಮಕ್ಕೆ ಬಂದ ಯೋಧನಿಗೆ ಅದ್ದೂರಿ ಸ್ವಾಗತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

22 ವರ್ಷಗಳ ಕಾಲ ಸೇನೆಯಲ್ಲಿ ಸೇವೆ; ನಿವೃತ್ತಿ ಬಳಿಕ ಸ್ವಗ್ರಾಮಕ್ಕೆ ಬಂದ ಯೋಧನಿಗೆ ಅದ್ದೂರಿ ಸ್ವಾಗತ

22 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸ್ವಗ್ರಾಮಕ್ಕೆ ಬಂದ ಸೈನಿಕ ದಿನೇಶ್ ಕುಮಾರ್ ಅವರಿಗೆ ಗ್ರಾಮಸ್ಥರು ಅದ್ದೂರಿ ಸ್ವಾಗತ ನೀಡಿ ಬರಮಾಡಿಕೊಂಡಿದ್ದಾರೆ.

ದಿನೇಶ್ ಕುಮಾರ್ ಅವರು ಶಿವಮೊಗ್ಗ ಜಿಲ್ಲೆ, ಸಾಗರ ತಾಲೂಕಿನ ಆನಂದಪುರ ಸಮೀಪದ ತಮ್ಮ ಸ್ವಗ್ರಾಮ ಹಿರೇಹಾರಕಕ್ಕೆ ಬಂದ ವೇಳೆ ಅವರನ್ನು ಮೆರವಣಿಗೆ ಹಾಗೂ ವಾದ್ಯದೊಂದಿಗೆ ಕರೆದುಕೊಂಡು ಹೋಗಲಾಗಿದೆ.

ಯಡೇಹಳ್ಳಿಯಿಂದ ಹಿರೆಹಾರಕ ಗ್ರಾಮದವರೆಗೆ ಮೆರವಣಿಗೆ ನಡೆದಿದ್ದು, ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾನು ದೇಶ ಸೇವೆ ಮಾಡಿರುವುದಕ್ಕೆ ಅಪಾರ ಸಂತೋಷವಿದೆ. ಜಮ್ಮು ಕಾಶ್ಮೀರ, ದೆಹಲಿ, ಮಣಿಪುರ, ತಮಿಳುನಾಡು ಸೇರಿದಂತೆ ವಿವಿಧ ಕಡೆ ಸೇವೆ ಸಲ್ಲಿಸಿದ್ದು, ಈ ಸಂದರ್ಭದಲ್ಲಿ ಕೆಲವು ಸ್ನೇಹಿತರನ್ನು ಕಳೆದುಕೊಂಡಿರುವುದಕ್ಕೆ ನೋವಿದೆ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...