alex Certify ರಾಜ್ಯದ 237 ಗ್ರಾಮಪಂಚಾಯಿತಿಗಳಿಗೆ `ಗಾಂಧಿ ಗ್ರಾಮ’ ಪುರಸ್ಕಾರ : ಇಲ್ಲಿದೆ ಸಂಪೂರ್ಣ ಪಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ 237 ಗ್ರಾಮಪಂಚಾಯಿತಿಗಳಿಗೆ `ಗಾಂಧಿ ಗ್ರಾಮ’ ಪುರಸ್ಕಾರ : ಇಲ್ಲಿದೆ ಸಂಪೂರ್ಣ ಪಟ್ಟಿ

ಬೆಂಗಳೂರು : 2022-2023 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ 233 ಗ್ರಾಮಪಂಚಾಯಿತಿ ಮತ್ತು ವಿಶೇಷ ಗಾಂಧಿ ಗ್ರಾಮ ಪುರಸ್ಕಾರಕ್ಕೆ ನಾಲ್ಕು ಗ್ರಾಮಪಂಚಾಯಿತಿಗಳನ್ನು ಆಯ್ಕೆ  ಮಾಡಲಾಗಿದೆ.

2022-23 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಜಿಲ್ಲಾ ಮಟ್ಟದ ಗಾಂಧಿ ಗ್ರಾಮ ಪುರಸ್ಕಾರ ಆಯ್ಕೆ ಸಮಿತಿಯಲ್ಲಿ ಆಯ್ಕೆ ಮಾಡಿ ದೃಢೀಕರಿಸಿ, ತಾವು ಸಲ್ಲಿಸಿರುವ ಆಯ್ಕೆ ಪಟ್ಟಿಯನ್ನು ದಿನಾಂಕ:25.09.2023 ರಂದು ಸರ್ಕಾರದ ಅವರ ಮುಖ್ಯ ಕಾರ್ಯದರ್ಶಿಗಳು(ಪಂ.ರಾಜ್) ರವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ಪರಾಮರ್ಶೆ ಸಮಿತಿ ಸಭೆಯಲ್ಲಿ ಮಂಡಿಸಿ, ಆಯ್ಕೆಯನ್ನು ಅಂತಿಮಗೊಳಿಸಲಾಗಿರುತ್ತದೆ.

ಅದರಂತೆ, 2022-23ನೇ ಸಾಲಿನ “ಗಾಂಧಿ ಗ್ರಾಮ ಪುರಸ್ಕಾರ” ಪ್ರಶಸ್ತಿಗೆ ಆಯ್ಕೆಯಾದ ಗ್ರಾಮ ಪಂಚಾಯತಿಗಳಿಗೆ ಪ್ರಶಸ್ತಿ ಪುದಾನ ಕಾರ್ಯಕ್ರಮವನ್ನು ದಿನಾಂಕ:02.10.2023ರಂದು ಬೆಳಿಗ್ಗೆ 10.00 ಗಂಟೆಗೆ ವಿಧಾನ ಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಲಾಗಿದ್ದು, ಸದರಿ ಕಾರ್ಯಕ್ರಮದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಭಾಗವಹಿಸಿ, ಪ್ರಶಸ್ತಿ ಸ್ವೀಕರಿಸಲು ಸೂಕ್ತ ಕ್ರಮ ವಹಿಸಲು ಸಂಬಂಧಿಸಿದವರಿಗೆ ಸೂಚನೆ ನೀಡಲು ಕೋರಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...