ನಾಂದೇಡ್: ಸರ್ಕಾರಿ ಆಸ್ಪತ್ರೆಯೊಂದರಲ್ಲಿ 24 ಗಂಟೆಯಲ್ಲಿ ನವಜಾತ ಶಿಶುಗಳು ಸೇರಿ ಬರೋಬ್ಬರಿ 24 ರೋಗಿಗಳು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ.
ಮಹಾರಾಷ್ಟ್ರದ ನಾಂದೇಡ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದೆ. ಕಳೆದ 24 ಗಂಟೆಯಲ್ಲಿ 12 ನವಜಾತ ಶಿಶುಗಳು ಹಾಗೂ 12 ರೋಗಿಗಳು ಮೃತಪಟ್ಟಿದ್ದಾರೆ. ಈ ಘಟನೆಗೆ ಆಸ್ಪತ್ರೆಯಲ್ಲಿ ವೈದ್ಯರ ಹಾಗೂ ಔಷಧಗಳ ಕೊರತೆಯೇ ಕಾರಣ ಎಂದು ಆಸ್ಪತ್ರೆ ಡೀನ್ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಮೂವರು ಸದದ್ಯರ ತಜ್ಞರ ಸಮಿತಿ ರಚಿಸಿ, ತನಿಖೆಗೆ ಆದೇಶ ನೀಡಲಾಗಿದ್ದು, ಇಂದು ಮಧ್ಯಾಹ್ನ 1 ಗಂಟೆಯೊಳಗೆ ವರದಿ ನೀಡಲು ಸೂಚಿಸಲಾಗಿದೆ.
ಮೃತರಲ್ಲಿ 6 ಮಹಿಳೆಯರು, 6 ಪುರುಷರು ಹಾಗೂ 12 ನವಜಾತ ಶಿಶುಗಳಿವೆ. ದೂರದೂರುಗಳಿಂದ ಇದೇ ಆರೋಗ್ಯ ಕೇಂದ್ರಕ್ಕೆ ರೋಗಿಗಳು ಬರುತ್ತಾರೆ. 70-80 ಕೀ.ಮಿ ದೂರವಿರುವ ಏಕೈಕ ಆರೋಗ್ಯ ಕ್ಕೇಂದ್ರ ಇದು. ಇತ್ತೀಚೆಗೆ ಏಕಾಏಕಿ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ವೈದ್ಯಕೀಯ ಸಿಬ್ಬಂದಿ ಹಗೂ ಔಷಧ ಕೊರತೆಯಿಂದಾಗಿ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಸಿಬಂದಿಗಳು ಹೇಳುತ್ತಿದ್ದಾರೆ.
ನಾಂದೇಡ್ ಆಸ್ಪತ್ರೆಯಲ್ಲಿನ ರೋಗಿಗಳ ಸಾವು ಪ್ರಕರಣ ಮಹಾರಾಷ್ಟ್ರ ಆಡಳಿತ ಪಕ್ಷಗಳು ಹಾಗೂ ವಿಪಕ್ಷ ಕಾಂಗ್ರೆಸ್ ನಡುವಿನ ವಾಕ್ಸಮರಕ್ಕೂ ಕಾರಣವಾಗಿದೆ. ಬಿಜೆಪಿ ಸರ್ಕಾರ ತನ್ನ ಪ್ರಚಾರಕ್ಕೆ ಸಾವಿರಾರು ಕೋಟಿ ಖರ್ಚು ಮಾಡುತ್ತದೆ. ಆದರೆ ಬಡವರ ಮಕ್ಕಳ ಔಷಧಿಗೆ ಹಣ ನೀಡುತ್ತಿಲ್ಲ. ಬಿಜೆಪಿ ದೃಷ್ಟಿಯಲ್ಲಿ ಬಡವರ ಜೀವಕ್ಕೆ ಬೆಲೆ ಇಲ್ಲ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.