
ರಾಂಚಿ: ಇಡೀ ದೇಶದ ಗಮನ ಸೆಳೆದಿದ್ದ ನ್ಯಾಯಾಧೀಶರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜಾರ್ಖಂಡ್ ರಾಜ್ಯದ ಧನಬಾದ್ ನಲ್ಲಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಅವರನ್ನು ಆಟೋ ಗುದ್ದಿಸಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ತನಿಖೆ ಕೈಗೊಂಡ ಪೊಲೀಸರು 17 ಮಂದಿಯನ್ನು ಬಂಧಿಸಿದ್ದು, 243 ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ನ್ಯಾಯಾಧೀಶರು ಬೆಳಗಿನ ವಾಕಿಂಗ್ ಮಾಡುವ ಸಂದರ್ಭದಲ್ಲಿ ಆಟೋ ಗುದ್ದಿಸಿ ಅವರನ್ನು ಹತ್ಯೆ ಮಾಡಲಾಗಿತ್ತು. ಪರಿಶೀಲನೆ ನಡೆಸಿದ ಪೊಲೀಸರು ಹಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಧನಬಾದ್ ನ ನ್ಯಾಯಾಧೀಶರ ಕಾಲೋನಿ ಬಳಿ ಉತ್ತಮ್ ಆನಂದ್ ವಾಯುವಿಹಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಆಟೋ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಉತ್ತಮ್ ಆನಂದ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.