ಕಿರಣ್ ರಾಜ್ ನಿರ್ದೇಶನದ ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಚಿತ್ರ ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸುವ ಮೂಲಕ ಹೊಸ ದಾಖಲೆ ಬರೆದಿದೆ. ಮನುಷ್ಯ ಹಾಗೂ ಶ್ವಾನದ ನಡುವಿನ ಪ್ರೀತಿಯ ಸಂಬಂಧದ ಬಗ್ಗೆ ಈ ಸಿನಿಮಾದಲ್ಲಿ ತೋರಿಸಲಾಗಿದ್ದು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. 450ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ತೆರೆಕಂಡ 25 ದಿನ ಪೂರೈಸುವ ಮೂಲಕ ಭರ್ಜರಿ ಪ್ರದರ್ಶನ ಕಾಣುತ್ತಿದೆ ಈಗಾಗಲೇ ಬಾಕ್ಸಾಫೀಸ್ ನಲ್ಲಿ 100 ಕೋಟಿ ಕಲೆಕ್ಷನ್ ಮಾಡಿದೆ.
ಈ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಸೇರಿದಂತೆ ಸಂಗೀತಾ ಶೃಂಗೇರಿ, ರಾಜ್ ಬಿ ಶೆಟ್ಟಿ, ಡ್ಯಾನಿಶ್ ಸೇಠ್, ಬಾಬಿ ಸಿಂಹ, ಭಾರ್ಗವಿ ನಾರಾಯಣ್, ವಿಜಯ್ ವಿಕ್ರಮ್ ಸಿಂಗ್, ಸೋಮಶೇಖರ್ ರಾವ್ ಸೇರಿದಂತೆ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ. ಪರಂವಾ ಸ್ಟುಡಿಯೋಸ್ ಬ್ಯಾನರ್ ನಡಿ ರಕ್ಷಿತ್ ಶೆಟ್ಟಿ ಹಾಗೂ ಜಿ.ಎಸ್ ಗುಪ್ತಾ ಬಂಡವಾಳ ಹೂಡಿದ್ದಾರೆ.