
ಆರ್. ಚಂದ್ರು ನಿರ್ದೇಶನದ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಚಿತ್ರದ ಟೀಸರ್ ಮೊನ್ನೆಯಷ್ಟೇ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆ ಮಾಡಲಾಗಿತ್ತು.
ಈ ಟೀಸರ್ ರಿಲೀಸ್ ಆದ 24 ಗಂಟೆಗಳಲ್ಲಿ 12 ಮಿಲಿಯನ್ ವೀಕ್ಷಣೆ ಪಡೆದಿತ್ತು. ಈ ಟೀಸರ್ 25 ಮಿಲಿಯನ್ ವೀಕ್ಷಣೆ ಪಡೆಯುವ ಮೂಲಕ ಭರ್ಜರಿಯಾಗಿ ಮುನ್ನುಗ್ಗುತ್ತಿದೆ.
ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಲಾಗಿದ್ದು, ಭಾರತದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಸಂಗೀತ ಸಂಯೋಜನೆ ನೀಡಿದ್ದಾರೆ.
ಕನ್ನಡ, ಸೇರಿದಂತೆ ತಮಿಳು, ತೆಲುಗು, ಮಲೆಯಾಳಂ, ಹಿಂದಿ ಹಾಗೂ ಮರಾಠಿ, ಒರಿಯಾ ಭಾಷೆಯಲ್ಲಿ ಈ ಸಿನಿಮಾ ತೆರೆ ಕಾಣಲಿದೆ.
