alex Certify 25 ಮಿಲಿಯನ್ ವೀಕ್ಷಣೆ ಪಡೆದ ‘ಕಬ್ಜ’ ಟೀಸರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

25 ಮಿಲಿಯನ್ ವೀಕ್ಷಣೆ ಪಡೆದ ‘ಕಬ್ಜ’ ಟೀಸರ್

ಆರ್. ಚಂದ್ರು ನಿರ್ದೇಶನದ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಚಿತ್ರದ ಟೀಸರ್ ಮೊನ್ನೆಯಷ್ಟೇ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆ ಮಾಡಲಾಗಿತ್ತು.‌

ಈ ಟೀಸರ್ ರಿಲೀಸ್ ಆದ 24 ಗಂಟೆಗಳಲ್ಲಿ 12 ಮಿಲಿಯನ್ ವೀಕ್ಷಣೆ ಪಡೆದಿತ್ತು. ಈ ಟೀಸರ್ 25 ಮಿಲಿಯನ್ ವೀಕ್ಷಣೆ ಪಡೆಯುವ ಮೂಲಕ ಭರ್ಜರಿಯಾಗಿ ಮುನ್ನುಗ್ಗುತ್ತಿದೆ.

ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಲಾಗಿದ್ದು, ಭಾರತದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಸಂಗೀತ ಸಂಯೋಜನೆ ನೀಡಿದ್ದಾರೆ.

ಕನ್ನಡ, ಸೇರಿದಂತೆ ತಮಿಳು, ತೆಲುಗು, ಮಲೆಯಾಳಂ, ಹಿಂದಿ ಹಾಗೂ ಮರಾಠಿ, ಒರಿಯಾ ಭಾಷೆಯಲ್ಲಿ ಈ ಸಿನಿಮಾ ತೆರೆ ಕಾಣಲಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...