ಕೊಚ್ಚಿ: ಇತ್ತೀಚಿನ ದಿನಗಳಲ್ಲಿ ಅತಿ ದೊಡ್ಡ ಮಾದಕವಸ್ತು ವಶಪಡಿಸಿಕೊಳ್ಳುವಿಕೆ ಕಾರ್ಯಾಚರಣೆ ನಡೆಸಲಾಗಿದ್ದು, 1200 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.
ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ(ಎನ್‌ಸಿಬಿ) ಮತ್ತು ಭಾರತೀಯ ನೌಕಾಪಡೆಯು 2,500 ಕೆಜಿ ಮೆಥಾಂಫೆಟಮೈನ್ ವಶಪಡಿಸಿಕೊಂಡಿದೆ. ಇದು ಅಕ್ರಮ ಡ್ರಗ್ಸ್ ಮಾರುಕಟ್ಟೆಯಲ್ಲಿ 12,000 ಕೋಟಿ ರೂಪಾಯಿ ಮೌಲ್ಯದ್ದಾಗಿದೆ ಎಂದು ಅಂದಾಜಿಸಲಾಗಿದೆ. ಶಂಕಿತ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಲಾಗಿದೆ ಎಂದು ಎನ್‌ಸಿಬಿ ಶನಿವಾರ ಬಿಡುಗಡೆ ಮಾಡಿದ ಪ್ರಕಟಣೆ ತಿಳಿಸಿದೆ.
ಮಾದಕವಸ್ತುಗಳನ್ನು ಸಾಗಿಸುತ್ತಿದ್ದ “ಮದರ್ ಶಿಪ್” ಅನ್ನು ಭಾರತೀಯ ಏಜೆನ್ಸಿ ತಡೆಹಿಡಿದಿರುವುದು ಇದೇ ಮೊದಲು ಎಂದು ಸಂಸ್ಥೆ ಹೇಳಿದೆ.