ಬೆಂಗಳೂರು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್ ನಿಂದ ಚಾಮರಾಜನಗರದವರೆಗೆ 2500 ಕಿಲೋಮೀಟರ್ ಮಾನವ ಸರಪಳಿ ನಿರ್ಮಿಸಲಾಗಿದ್ದು, ಕಾರ್ಯಕ್ರಮ ಗಿನ್ನೆಸ್ ದಾಖಲೆಗೆ ಪಾತ್ರವಾಗಿದೆ.
ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ ಕಾರ್ಯಕ್ರಮಕ್ಕೆ ಚಾಲನೆ ನಿಡಿದ್ದು, ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಗಿನ್ನೆಸ್ ವಿಶ್ವ ದಾಖಲೆ ಪ್ರಶಸ್ತಿ ಸ್ವೀಕರಿಸಿದ್ದಾರೆ.
ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 2500 ಕಿ.ಮೀ. ಉದ್ದದ ಮಾನವ ಸರಪಳಿಯನ್ನು ರಾಜ್ಯಾದ್ಯಂತ ನಿರ್ಮಿಸುವ ಮೂಲಕ ವಿಶ್ವ ದಾಖಲೆಗೆ ಪಾತ್ರವಾಗಿದೆ.
ಇದೇವೇಳೆ ಸಂವಿಧಾನದ ಮಹತ್ವ ಸಾರುವ ಪ್ರಸ್ತಾವನೆ ಓದುವುದು ಹಾಗೂ ಪ್ರಜಾಪ್ರಭುತ್ವದ ರಕ್ಷಣೆಯ ಹೊಣೆಗಾರಿಕೆ ನೆನಪಿಸುವ ಜಾಗೃತಿ ಮೂಡಿಸಲಾಗಿದೆ. ರಾಜ್ಯಾದ್ಯಂತ 10ಲಕ್ಷ ಗಿಡಗಳನ್ನು ನೆಡಲಾಗಿದೆ.
ಈ ವಿನೂತನ ಮತ್ತು ಬೃಹತ್ ಕಾರ್ಯಕ್ರಮಕ್ಕೆ ಲಂಡನ್ ನ ವಿಶ್ವ ದಾಖಲೆ ಪರಿಶೀಲಿಸುವ ತಂಡ ಆಗಮಿಸಿದ್ದು, ಎಲ್ಲವೂ ದಾಖಲೆಗಳ ನಿಯಮದಂತಿರುವುದನ್ನು ವಿವಿಧ ಹಂತಗಳಲ್ಲಿ ಅಧ್ಯಯನ ಮಾಡಿ ನಂತರ ಕಾರ್ಯಕ್ರಮ ದಾಖಲೆಗಳ ನಿಯಮಕ್ಕೆ ಒಪ್ಪುವಂತೆ ಇದ್ದ ಹಿನ್ನಲೆ ಗಿನ್ನೆಸ್ ದಾಖಲೆ ಪ್ರಶಸ್ತಿ ನೀಡಲಾಗಿದೆ.