![Nimika Ratnakar, ರಜೆ ಕೊಡಲಿಲ್ಲ ಎಂದು ಕೆಲಸಕ್ಕೆ ರಾಜೀನಾಮೆ ಕೊಟ್ಟು ಬಂದಿದ್ದ ನಟಿ ನಿಮಿಕಾ ಬದುಕೇ ಬದಲಾಯ್ತು! - actress nimika ratnakar talks about her film acting singing and modelling journey ...](https://vijaykarnataka.com/photo/msid-80339905,imgsize-340126/pic.jpg)
ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಪುಷ್ಪವತಿ ಹಾಡಿಗೆ ಹೆಜ್ಜೆ ಹಾಕಿದ್ದ ನಿಮಿಕಾ ರತ್ನಾಕರ್ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ.
ನಿಮಿಕಾ ರತ್ನಾಕರ್ ಇಂದು ತಮ್ಮ 27ನೇ ಜನ್ಮದಿನವನ್ನು ಸ್ನೇಹಿತರೊಂದಿಗೆ ಆಚರಿಸಿಕೊಳ್ಳುತ್ತಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ತ್ರಿಶೂಲಂ’ ಸೇರಿದಂತೆ ‘ಮಿಸ್ಟರ್ ಬ್ಯಾಚುಲರ್’ ‘ಅಬ್ಬರ’ ಚಿತ್ರದಲ್ಲಿ ತೆರೆ ಹಂಚಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯವಾಗಿರುವ ನಿಮಿಕಾ ತಮ್ಮ ಪ್ರತಿಯೊಂದು ವಿಚಾರವನ್ನು ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಲೇ ಇರುತ್ತಾರೆ. ಇಂದು ನಿಮಿಕಾ ರತ್ನಾಕರ್ ಹುಟ್ಟು ಹಬ್ಬದ ಪ್ರಯುಕ್ತ ಸ್ಯಾಂಡಲ್ ಹಲವಾರು ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ವಿಶ್ ಮಾಡಿದ್ದಾರೆ.