alex Certify ಸರ್ಕಾರಿ ವಸತಿ ಶಾಲೆಯ 28 ವಿದ್ಯಾರ್ಥಿನಿಯರಿಗೆ ಕೋವಿಡ್​ ಪಾಸಿಟಿವ್​..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ವಸತಿ ಶಾಲೆಯ 28 ವಿದ್ಯಾರ್ಥಿನಿಯರಿಗೆ ಕೋವಿಡ್​ ಪಾಸಿಟಿವ್​..!

ಸರ್ಕಾರಿ ವಸತಿ ಶಾಲೆಯಲ್ಲಿದ್ದ 28 ವಿದ್ಯಾರ್ಥಿನಿಯರು ಕೋವಿಡ್​ ಸೋಂಕಿಗೆ ತುತ್ತಾದ ಘಟನೆಯು ತೆಲಂಗಾಣದ ಖಮ್ಮಂ ಜಿಲ್ಲೆಯ ವೈರಾ ಎಂಬಲ್ಲಿ ನಡೆದಿದೆ. ಮಕ್ಕಳು ಸೋಂಕಿಗೆ ತುತ್ತಾಗಿರುವ ವಿಷಯ ತಿಳಿಯುತ್ತಿದ್ದಂತೆಯೇ ಶಾಲೆಗೆ ಧಾವಿಸಿದ ಪೋಷಕರು ಮಕ್ಕಳನ್ನು ತಮ್ಮೊಡನೆ ಮನೆಗೆ ಕಳುಹಿಸಿಕೊಡುವಂತೆ ಆಗ್ರಹಿಸಿದ್ದಾರೆ.

ಈ ನಡುವೆ ಆರೋಗ್ಯ ಇಲಾಖೆಯು ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಕೊರೊನಾ ಪರೀಕ್ಷೆಯನ್ನು ನಡೆಸಿದೆ. ಈ ವಸತಿ ಶಾಲೆಯಲ್ಲಿ ಒಟ್ಟು 575 ಮಂದಿ ವ್ಯಾಸಂಗ ಮಾಡುತ್ತಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾ ಆರೋಗ್ಯ ಇಲಾಖೆಗೆ ಕರೆ ಮಾಡಿದ ತೆಲಂಗಾಣ ಆರೋಗ್ಯ ಸಚಿವ, ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಅವಲೋಕನ ನಡೆಸಿದ್ದಾರೆ. ಅಲ್ಲದೇ ಶಾಲೆಯ ಸುತ್ತಮುತ್ತಲಿನ ವಾತಾವರಣದಲ್ಲಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...