ಬೆಂಗಳೂರು : 2 ನೇ ಹಂತದ ಲೋಕಸಭೆ ಚುನಾವಣೆಗೆ ರಾಜ್ಯದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.
ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಕಾರ್ಯ ತೀವ್ರಗೊಂಡ ಬೆನ್ನಲ್ಲೇ ಉಳಿದ 14 ಕ್ಷೇತ್ರಗಳಿಗೆ ಇಂದು ಅಧಿಸೂಚನೆ ಪ್ರಕಟವಾಗಲಿದೆ. ಇಂದು ಬೆಳಗ್ಗೆ 11 ಗಂಟೆಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಪ್ರತಿದಿನ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಕೆ ಮಾಡಬಹುದು.
ಚಿಕ್ಕೋಡಿ. ಬೆಳಗಾವಿ, ವಿಜಯಪುರ, ಬಾಗಲಕೋಟ, ರಾಯಚೂರು. ಕಲಬುರಗಿ, ಬೀದರ್, ಬಳ್ಳಾರಿ, ಹಾವೇರಿ,ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಕೊಪ್ಪಳ ಹಾಗೂ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೂ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.
ಅಭ್ಯರ್ಥಿಗಳು ತಮ್ಮ ಉಮೇದುವಾಶರಿಕೆ ಸಲ್ಲಿಸಲು ಏ.19 ಕೊನೆಯ ದಿನವಾಗಿದ್ದು, 20 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಏ.22 ಕೊನೆಯ ದಿನಾಂಕವಾಗಿದೆ. ಮೇ 7 ರಂದು ಮತದಾನ ನಡೆಯಲಿದೆ.