ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಇಂದು ಬೆಳಗ್ಗೆ 11.30 ಕ್ಕೆ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪಿಯು ಬೋರ್ಡ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ.
ನಂತರ ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ಫಲಿತಾಂಶವನ್ನು ಕಳುಹಿಸಲಾಗುವುದು. ಫಲಿತಾಂಶ ವೀಕ್ಷಿಸಲು ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.kseeb.kar.nic.in, www.pue.kar.nic.in ಗಮನಿಸಬಹುದು.