ಬೆಂಗಳೂರು : 2024 ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಪಾಸಾಗಿದ್ದರೆ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನದಲ್ಲಿದ್ದು, ಶೇ.97.37 ಫಲಿತಾಂಶ ಪಡೆದುಕೊಂಡಿದೆ. ಉಡುಪಿ ದ್ವಿತೀಯ ಸ್ಥಾನದಲ್ಲಿ ಶೇ.96.80 ಫಲಿತಾಂಶ ಗಳಿಸಿದೆ. ಮೂರನೇ ಹಾಗೂ ನಾಲ್ಕನೇ ಸ್ಥಾನಗಳಲ್ಲಿ ವಿಜಯಪುರ (ಶೇ.94.89) ಹಾಗೂ ಉತ್ತರ ಕನ್ನಡ (ಶೇ.92.51) ಇವೆ. ಕೊನೆಯ ಸ್ಥಾನದಲ್ಲಿ ಗದಗ (ಶೇ.72.86) ಪಡೆದಿದೆ. ಬೆಂಗಳೂರು ಉತ್ತರ ಶೇ.88.67 ಹಾಗೂ ಬೆಂಗಳೂರು ದಕ್ಷಿಣ ಶೇ.89.57 ಫಲಿತಾಂಶ ದಾಖಲಿಸಿವೆ.
ಡಿಸ್ಟಿಂಕ್ಷನ್ ಎಷ್ಟು, ಪಾಸ್ ಆದವರು ಎಷ್ಟು..? ಎಂಬುದನ್ನು ನೋಡುವುದಾದರೆ ಇಲ್ಲಿದೆ ಕಂಪ್ಲೀಟ್ ಮಾಹಿತಿ..!