
ನವದೆಹಲಿ: ಶುಕ್ರವಾರ ದೆಹಲಿಯ ಮುಕುಂದಪುರದಲ್ಲಿ ಪ್ರವಾಹದ ನೀರಿನಲ್ಲಿ ಸ್ನಾನ ಮಾಡುವಾಗ ಕನಿಷ್ಠ ಮೂವರು ಮಕ್ಕಳು ಮುಳುಗಿ ಸಾವನ್ನಪ್ಪಿದ್ದಾರೆ.
ಮೆಟ್ರೊ ಕಾಮಗಾರಿ ನಡೆಯುವ ಸ್ಥಳದಲ್ಲಿ ಸ್ನಾನ ಮಾಡಲು ಧುಮುಕಿದ ಮಕ್ಕಳು ನಾಲೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಘಟನೆಯ ನಂತರ, ಮೂವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ.
ಮೃತರನ್ನು ಪಿಯೂಷ್ (13), ನಿಖಿಲ್ (10) ಮತ್ತು ಆಶಿಶ್ (13) ಎಂದು ಗುರುತಿಸಲಾಗಿದೆ. ಏತನ್ಮಧ್ಯೆ, ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಯಮುನಾ ನದಿಯ ಪ್ರವಾಹದ ದೆಹಲಿ ಜಲಾವೃತವಾಗಿದೆ.