
ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ 10 ರ ಬುಧವಾರದಂದು ಮತದಾನ ನಡೆಯಲಿದ್ದು, ಮೇ 13ರ ಶನಿವಾರ ಮತ ಎಣಿಕೆ ನಡೆಯಲಿದೆ. ಮತದಾನ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ನಾಲ್ಕು ದಿನಗಳ ಕಾಲ ಮದ್ಯ ಮಾರಾಟ ಬಂದ್ ಆಗಲಿದೆ.
ಮೇ 10 ರಂದು ಮತದಾನ ನಡೆಯಲಿರುವ ಹಿನ್ನಲೆಯಲ್ಲಿ ಮೇ 8 ರ ಸಂಜೆ 5 ಗಂಟೆಯಿಂದಲೇ ಮದ್ಯದಂಗಡಿಗಳು ಬಂದ್ ಆಗಲಿವೆ. ಮೇ 10 ರ ಮಧ್ಯರಾತ್ರಿಯವರೆಗೂ ಇದು ಮುಂದುವರಿಯಲಿದೆ.
ಇನ್ನು ಮತ್ತು ಎಣಿಕೆ ದಿನವಾದ ಮೇ 13 ರಂದು ಅಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯದಂಗಡಿಗಳು ಬಂದ್ ಇರಲಿದ್ದು, ಒಂದು ವೇಳೆ ಮರು ಮತದಾನ ನಡೆದ ಸಂದರ್ಭದಲ್ಲಿ ಅಲ್ಲಿಗೂ ಸಹ ಈ ಆದೇಶ ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ.