alex Certify BREAKING: ಬಾಯ್ಲರ್ ಸ್ಪೋಟದಿಂದ ಭಾರಿ ಬೆಂಕಿ; ಮೂವರು ಸಜೀವ ದಹನ, 8 ಕಾರ್ಮಿಕರು ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಾಯ್ಲರ್ ಸ್ಪೋಟದಿಂದ ಭಾರಿ ಬೆಂಕಿ; ಮೂವರು ಸಜೀವ ದಹನ, 8 ಕಾರ್ಮಿಕರು ಗಂಭೀರ

ಮುಂಬೈ: ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟಗೊಂಡು ಮೂವರು ಸಾವನ್ನಪ್ಪಿದ್ದಾರೆ. ಎಂಟು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಾರಾಷ್ಟ್ರದ ಪಾಲ್ಗರ್ ಜಿಲ್ಲೆಯ ವಸಾಯಿ ಪ್ರದೇಶದಲ್ಲಿ ದುರಂತ ಸಂಭವಿಸಿದೆ.

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸಾಯಿ ಪ್ರದೇಶದಲ್ಲಿ ಬಾಯ್ಲರ್ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರ ಸಾವು ಮತ್ತು ಎಂಟು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಾಲ್ಘರ್ ಜಿಲ್ಲಾ ವಿಪತ್ತು ನಿರ್ವಹಣಾ ಕೋಶದ ಅಧಿಕಾರಿಗಳು, ಚಂದರ್‌ಪಾಡಾ ಪ್ರದೇಶದಲ್ಲಿ ಇರುವ ವಿದ್ಯುತ್ ಉಪಕರಣಗಳ ತಯಾರಿಕಾ ಕಂಪನಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಬೆಂಕಿಯ ಘಟನೆ ಸಂಭವಿಸಿದೆ ಎಂದು ತಿಳಿಸಿದ್ದಾರೆ.

ಮೂವರು ಕಾರ್ಮಿಕರು ಗುರುತಿಸಲಾಗದಷ್ಟು ಸುಟ್ಟು ಕರಕಲಾಗಿದ್ದಾರೆ. ಎಂಟು ಮಂದಿ ತೀವ್ರ ಸುಟ್ಟ ಗಾಯಗಳಿಗೆ ಒಳಗಾಗಿದ್ದಾರೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...